ಪುತ್ತೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ಇದರ ಆಜೀವ ಸದಸ್ಯರು, ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯೋಪಾಧ್ಯಾಯ ಕೆ.ಸಿ. ಪಾಟಾಳಿ ಪಡುಮಲೆ (78 ವ.) ಇಂದು ಮುಂಜಾನೆ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದ ಅವರು ತುಳುನಾಡಿನ ಸಾಂಸ್ಕೃತಿಕ ಸಂಘಟಕರಾಗಿದ್ದರು. ಇವರು ದಕ್ಷಿಣ ಕನ್ನಡದ ಐತಿಹಾಸಿಕ ತಾಣವಾದ ಕೋಟಿ-ಚೆನ್ನಯರ ಜನ್ಮಭೂಮಿಯ ಅಭಿವೃದ್ಧಿ ಹಾಗೂ ಸಂರಕ್ಷಣೆಗಾಗಿ ಶ್ರಮಿಸುತ್ತಿರುವ ವ್ಯಕ್ತಿಗಳಲ್ಲಿ ಓರ್ವರಾಗಿದ್ದು, ಸ್ಥಳೀಯ ಇತಿಹಾಸ ಮತ್ತು ಯಕ್ಷಗಾನ ಕಲೆಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಭಾಗವಹಿಸುತ್ತಿದ್ದರು.
ಸುಳ್ಯ ಪದವು ಅನುದಾನಿತ ಶಾಲೆಯಲ್ಲಿ ಕರ್ತವ್ಯ ಆರಂಭಿಸಿದ ಕೆ.ಸಿ. ಪಾಟಾಳಿ ಪಡುಮಲೆ ಅವರು, ಬಳಿಕ ಈಶ್ವರಮಂಗಲ ಶಾಲೆಗೆ ವರ್ಗಾವಣೆಗೊಂಡು ಸಹ ಶಿಕ್ಷಕರಾಗಿ, ನಂತರ ಮುಖ್ಯೋಪಾಧ್ಯಾಯರಾಗಿ ಅನನ್ಯ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಆರೋಗ್ಯ ಹದಗೆಟ್ಟಿದ್ದರಿಂದ ಮಗಳ ಮನೆಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು.

0 Comments