ನವದೆಹಲಿ : ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಧೀರಜ್ ಸೇಠ್ ಅವರು ಜೂನ್ 30 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಸೇನೆಯ ಹಾಲಿ ಮುಖ್ಯಸ್ಥರಾದ ಜನರಲ್ ಉಪೇಂದ್ರ ದ್ವಿವೇದಿ ಅವರ ನಿವೃತ್ತಿಯ ಬಳಿಕ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಶನಿವಾರ ಕೇಂದ್ರ ಸರ್ಕಾರ ಹೇಳಿದೆ.
ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಪ್ರಸ್ತುತ ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೂನ್ 30 ರಂದು ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, 2028 ರ ಆಗಸ್ಟ್ 31 ರ ವರೆಗೆ ಅಧಿಕಾರದಲ್ಲಿ ಇರಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ಆದೇಶ ಪತ್ರದಲ್ಲಿ ತಿಳಿಸಿದೆ.

0 Comments