ಕಾಸರಗೋಡು : ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯ ಸೀತಾಂಗೋಳಿ ಬಿವರೇಜ್ ಶಾಪ್ ಸಮೀಪದ ಕ್ವಾರ್ಟರ್ಸ್‌ನಲ್ಲಿ ವಾಸವಾಗಿದ್ದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಜೂನು ನರ್ಸಾರಿ (23) ನಾಪತ್ತೆಯಾದ ಯುವತಿಯಾಗಿದ್ದಾರೆ. ಮಂಗಳವಾರ ಬೆಳಿಗ್ಗೆ ಸುಮಾರು 10.30ರ ವೇಳೆಗೆ ಕ್ವಾರ್ಟರ್ಸ್‌ನಿಂದ ಹೊರಹೋದ ಅವರು ಬಳಿಕ ಮನೆಗೆ ಮರಳಿಲ್ಲ ಎಂದು ತಿಳಿದುಬಂದಿದೆ.
ಯುವತಿ ಎಲ್ಲಿಗೆ ತೆರಳಿದ್ದಾರೆ ಎಂಬುದು ತಿಳಿಯದ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಿಧ ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ದೊರಕಿರಲಿಲ್ಲ. ಬಳಿಕ ಅವರ ಪತಿ ನಿಖಿಲ್ ನರ್ಸಾರಿ ಕುಂಬಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಯುವತಿ ಕ್ವಾರ್ಟರ್ಸ್‌ನಿಂದ ಹೊರಡುವ ವೇಳೆ ತನ್ನೊಂದಿಗೆ ಹಣವನ್ನು ತೆಗೆದುಕೊಂಡು ಹೋಗಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಯುವತಿಯ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

0 Comments