Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯನ್ನು ಬೇಕಲದ ಲಾಡ್ಜ್ ಗೆ ಕರೆತಂದು ಅತ್ಯಾಚಾರಕ್ಕೆ ಯತ್ನ : ಆರೋಪಿ ನ್ಯಾಯಾಲಯಕ್ಕೆ ಶರಣು

 

ಕಾಸರಗೋಡು : ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಅತ್ಯಾಚಾರ ಮಾಡಲು ಯತ್ನಿಸಿದ ದೂರಿನ ಆರೋಪಿ ನ್ಯಾಯಾಲಯದಲ್ಲಿ ಶರಣಾಗಿದ್ದಾನೆ. ಬಿಜೆಪಿ ಕಾರ್ಯಕರ್ತ ಹಾಗೂ ಮೆಡಿಕಲ್ ರೆಪ್ರೆಸೆಂಟಿವ್ ಕೋರಂ ಕಾನಾಯಿ ಅಣೆಕಟ್ಟಿನ ಸಮೀಪದ ಜಿತಿನ್(29) ಎಂಬಾತ ತಲಶ್ಯೇರಿಯ ಪೋಕ್ಸೊ ನ್ಯಾಯಾಲಯದಲ್ಲಿ ಶರಣಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಪಟ್ಟ  ಘಟನೆ ಏಪ್ರಿಲ್ 13 ರಂದು ನಡೆದಿದೆ. 17ವರ್ಷದ ಬಾಲಕಿಯೊಂದಿಗೆ ಸ್ನೇಹ ಬೆಳೆಸಿದ ನಂತರ, ಬೇಕಲ್ ಬೀಚ್  ಬಳಿಯ ಲಾಡ್ಜ್ ಗೆ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂಬ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದೆ. ಪ್ರಕರಣದ ಬಗ್ಗೆ ತಿಳಿದ ಆರೋಪಿ ತನ್ನ ಫೋನ್ ಸ್ವಿಚ್ ಆಫ್ ಮಾಡಿ ರಾಜ್ಯ ಬಿಟ್ಟು ಪರಾರಿಯಾಗಿದ್ದಾನೆ. ಪಯ್ಯನ್ನೂರು ಡಿವೈಎಸ್ಪಿ ನೇತೃತ್ವದಲ್ಲಿ ಆತನನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಆತ ನ್ಯಾಯಾಲಯದಲ್ಲಿ ಶರಣಾಗಿದ್ದಾನೆ. ಜಿತಿನ್ ಸಲ್ಲಿಸಿದ  ಜಾಮೀನು ಅರ್ಜಿಯನ್ನು ನ್ಯಾಯಾಲಯವು ಹಿಂದಿನ ದಿನ ತಿರಸ್ಕರಿಸಿತ್ತು.

Post a Comment

0 Comments


ಜಾಹೀರಾತು

Responsive Advertisement