ಉಡುಪಿ : ಅಪ್ರಾಪ್ತ ಬಾಲಕಿಯೋರ್ವೆ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ ಬಾಲಕಿ ಮೇ 22ರಿಂದ ನಾಪತ್ತೆ ಯಾಗಿದ್ದು, 5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪಿ.ಐ ಮೊ..ನಂ: 9480805458, ಪಿ.ಎಸ್.ಐ ಮೊ.ನಂ: 8277988949, 8277988950 ಹಾಗೂ ಉಡುಪಿ ಮಹಿಳಾ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2525599 ಅನ್ನು ಸಂಪರ್ಕಿಸಬಹುದು ಎಂದು ಉಡುಪಿ ಮಹಿಳಾ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

0 Comments