Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯ ವತಿಯಿಂದ ‘ನವ ಭಾರತ ಸದಸ್’


ಕಾಸರಗೋಡು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 12ನೇ ವರ್ಷದ ಸಾಧನೆಗಳ ಅಂಗವಾಗಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯ ವತಿಯಿಂದ ‘ನವ ಭಾರತ ಸದಸ್’ ಹೆಸರಿನಲ್ಲಿ ವಿಕಸಿತ ಭಾರತ ಸಮಾವೇಶವನ್ನು ಆಯೋಜಿಸಲಾಯಿತು.
ಡಾ. ಶ್ಯಾಮಪ್ರಸಾದ್ ಮುಖರ್ಜಿ ಮಂದಿರದಲ್ಲಿ ನಡೆದ ಕಾರ್ಯಕ್ರಮವನ್ನು ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಅಶ್ವಿನಿ ಎಂಎಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶ್ವದ ಹತ್ತನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿದ್ದ ಭಾರತವನ್ನು ಕೇವಲ 12 ವರ್ಷಗಳಲ್ಲಿ ನಾಲ್ಕನೇ ಸ್ಥಾನಕ್ಕೆ ತಲುಪಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು. ಭ್ರಷ್ಟಾಚಾರ ಮತ್ತು ಆಡಳಿತಾತ್ಮಕ ಅಸ್ಥಿರತೆಯಿಂದ ಬಳಲುತ್ತಿದ್ದ ದೇಶಕ್ಕೆ ಮೋದಿ ಆಡಳಿತದಲ್ಲಿ ಆರ್ಥಿಕ ಚೈತನ್ಯ ಹಾಗೂ ಸ್ಪಷ್ಟ ದಿಕ್ಕು ದೊರೆತಿದೆ ಎಂದು ಅಭಿಪ್ರಾಯಪಟ್ಟರು.
ಜನಕಲ್ಯಾಣ ಯೋಜನೆಗಳ ಜೊತೆಗೆ ಮಹತ್ವಾಕಾಂಕ್ಷಿ ಮೂಲಸೌಕರ್ಯ ಯೋಜನೆಗಳನ್ನು ಜಾರಿಗೆ ತರಲಾಗಿದೆ. ವಂದೇ ಭಾರತ್ ರೈಲುಗಳಿಂದ ಹಿಡಿದು ಬುಲೆಟ್ ರೈಲು, ಯುದ್ಧ ವಿಮಾನಗಳಿಂದ ಸೆಮಿಕಂಡಕ್ಟರ್ ಉತ್ಪಾದನೆವರೆಗೆ ಹಲವು ಕ್ಷೇತ್ರಗಳಲ್ಲಿ ಭಾರತ ಸ್ವಾವಲಂಬನೆಯತ್ತ ಸಾಗುತ್ತಿದೆ ಎಂದು ಅವರು ಹೇಳಿದರು. ಮಾಹಿತಿ ತಂತ್ರಜ್ಞಾನ ಹಾಗೂ ವಿಜ್ಞಾನ ಕ್ಷೇತ್ರಗಳಲ್ಲಿನ ಪ್ರಗತಿ 2047ರೊಳಗೆ ‘ವಿಕಸಿತ ಭಾರತ’ ಗುರಿ ಸಾಧಿಸಲು ನೆರವಾಗಲಿದೆ ಎಂದರು.
 ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನುಲಾಲ್ ಮೇಲತ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನಿಲ್, ಜಿಲ್ಲಾ ಉಪಾಧ್ಯಕ್ಷ ಎಂ. ಬಲರಾಜ್, ಕಿಸಾನ್ ಮೋರ್ಚಾ ರಾಜ್ಯ ಉಪಾಧ್ಯಕ್ಷ  ಕುಂಞಿಕ್ಕಣ್ಣನ್ ಬಳಾಲ್, ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡ, ಜಿಲ್ಲಾ ಖಜಾಂಚಿ ವೀಣಾ ಅರುಣ್ ಶೆಟ್ಟಿ, ಜಿಲ್ಲಾ ಸೆಲ್ ಸಂಯೋಜಕ ಸುಕುಮಾರ್ ಕುದ್ರೆಪ್ಪಾಡಿ ಸೇರಿದಂತೆ ಬಿಜೆಪಿ - ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಮಾವೇಶಕ್ಕೂ ಮುನ್ನ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರನ್ನು ಸ್ಮರಿಸಿ ಪುಷ್ಪ ನಮನ ಸಲ್ಲಿಸಲಾಯಿತು.

Post a Comment

0 Comments



ಜಾಹೀರಾತು

Responsive Advertisement