SUICIDE : ನಾಲ್ಕು ತಿಂಗಳ ಗರ್ಭಿಣಿ ಮಹಿಳೆಯೊಬ್ಬರು ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ತೆರೆದ ಬಾವಿಗೆ ಹಾರಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದ ಅಂಬಿಕಾ (25) ಹಾಗೂ ಆಕೆಯ ಒಂದೂವರೆ ವರ್ಷದ ಪುತ್ರ ಆರಾಧ್ಯ ಎಂದು ಗುರುತಿಸಲಾಗಿದೆ. ಅಂಬಿಕಾ ಅವರು ಮೂರು ವರ್ಷಗಳ ಹಿಂದೆ ವೀರಭದ್ರಪ್ಪ ಅವರನ್ನು ವಿವಾಹವಾಗಿದ್ದು, ಇದೀಗ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು.
ಮಂಗಳವಾರ ಬೆಳಿಗ್ಗೆ ಮನೆಯಿಂದ ಹೊರಟಿದ್ದ ಅಂಬಿಕಾ ಮರಳಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ವ್ಯಾಪಕ ಹುಡುಕಾಟ ನಡೆಸಿದ್ದರು. ಈ ವೇಳೆ ಗ್ರಾಮದ ಹೊರವಲಯದಲ್ಲಿರುವ ತೆರೆದ ಬಾವಿಯ ಸಮೀಪ ಅಂಬಿಕಾ ಅವರ ಚಪ್ಪಲಿ ಪತ್ತೆಯಾಗಿದ್ದು, ಅನುಮಾನಗೊಂಡು ಬಾವಿಯಲ್ಲಿ ಶೋಧ ಕಾರ್ಯ ಕೈಗೊಳ್ಳಲಾಯಿತು.
ಶೋಧದ ವೇಳೆ ಬಾವಿಯೊಳಗೆ ತಾಯಿ ಹಾಗೂ ಮಗುವಿನ ಮೃತದೇಹಗಳು ಪತ್ತೆಯಾಗಿದ್ದು, ಮಾಹಿತಿ ತಿಳಿದ ನರೋಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ Pರಾಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.

0 Comments