Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಇಂದು ಸಂಜೆ 4.05 ಕ್ಕೆ ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ : ಸಿದ್ಧತೆ ಪೂರ್ಣ

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್  ಇಂದು ಸಂಜೆ 4.05 ಕ್ಕೆ ಲೋಕಭವನದಲ್ಲಿ  ಪ್ರಮಾಣವಚನ ಸ್ವೀಕರಿಸಲಿದ್ದಾರೆ.  ರಾಜ್ಯಪಾಲ ಥಾವರ್‌ಚಂದ್ ಗಫ್ಲೋತ್ ಅವರ ಸಮ್ಮುಖದಲ್ಲಿ ನಡೆಯುವ  ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಮೊದಲಾದವರು ಭಾಗವಹಿಸಲಿರುವರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಹಿತ 10-12 ಸಚಿವರು ಈ ದಿನದ  ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಸ್ವೀಕರಿಸುವವರಲ್ಲಿ ಕೆ.ಜೆ. ಜಾರ್ಜ್ ಮತ್ತು ಯು.ಟಿ. ಖಾದರ್ ಮಲಯಾಳಿಗಳಾಗಿದ್ದಾರೆ. ಕೆ.ಜೆ. ಜಾರ್ಜ್ ಕೊಟ್ಟಾಯಂ ಜಿಲ್ಲೆಯ ಕಿಡಂಗೂರಿನವರು. ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದರು. ಕಾಸರಗೋಡು ಜಿಲ್ಲೆಯ ಉಪ್ಪಳ ಮೂಲದ ಯು.ಟಿ.ಖಾದರ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಖಾದರ್ ಅವರು ಕಳೆದ ಸರ್ಕಾರದ ಅವಧಿಯಲ್ಲಿ ವಿಧಾನಸಭಾಧ್ಯಕ್ಷರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು.. ಹಿರಿಯ ನಾಯಕರಾದ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಪ್ರಿಯಾಂಕ್ ಖರ್ಗೆ ಮತ್ತಿತರರು ಸಚಿವರಾಗಲಿದ್ದಾರೆ. ಈಶ್ವರ ಖಂಡ್ರೆ, ರಾಮಲಿಂಗಾ ರೆಡ್ಡಿ, ಶಿವರಾಜ್ ತಂಕಡಗಿ ಮತ್ತು ರೂಪಾ ಶಶಿಧರ್ ಅವರು ಸಚಿವ ಸಂಪುಟದ ಇತರ ಪ್ರಮುಖರಾಗಿದ್ದಾರೆಂದು ತಿಳಿದು ಬಂದಿದೆ.

Post a Comment

0 Comments


ಜಾಹೀರಾತು

Responsive Advertisement