ಕಾಸರಗೋಡು : ಜಿಲ್ಲೆಯಲ್ಲಿ ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮ ನಡೆಯಲಿದ್ದು, ಪರಿಶಿಷ್ಟ ಪಂಗಡದ ಮಕ್ಕಳು ಹಾಗೂ ಅತಿಥಿ ಕಾರ್ಮಿಕರ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕುವಂತೆ   ಬಾರಿ ಗಮನಹರಿಸಲಾಗಿದೆ.  ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ನಿಮಿತ್ತ ಜಿಲ್ಲಾಧಿಕಾರಿ ಚೇಂಬರ್ ನಲ್ಲಿ ನಡೆದ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಈ ವಿಷಯ ತಿಳಿಸಿದರು. ಜಿಲ್ಲೆಯಲ್ಲಿ ಐದು ವರ್ಷದೊಳಗಿನ 103001 ಮಕ್ಕಳಿಗೆ ಲಸಿಕೆ ಹಾಕಲಾಗುವುದು. ಜಿಲ್ಲೆಯ ವಿವಿಧ ಪಿಎಚ್‌ಸಿಗಳಲ್ಲಿಲಸಿಕೆ ಸಂಗ್ರಹಿಸಿಡಲಾಗುವುದು.