Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಅಯೋಧ್ಯೆ ದೇಣಿಗೆ ಹಗರಣ : ನೈತಿಕ ಹೊಣೆ ಹೊತ್ತು ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ ರಾಜೀನಾಮೆ

 

ಅಯೋಧ್ಯೆ : ರಾಮಮಂದಿರದ ದೇಣಿಗೆ ದುರುಪಯೋಗ ಮತ್ತು ಕಳ್ಳತನದ ಆರೋಪಗಳ ನಡುವೆಯೇ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದ ಚಂಪತ್ ರಾಯ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಟ್ರಸ್ಟಿ ಅನಿಲ್ ಮಿಶ್ರಾ ಕೂಡ ರಾಜೀನಾಮೆ ಸಲ್ಲಿಸಿರುವುದಾಗಿ ಮೂಲಗಳು ತಿಳಿಸಿವೆ.

ದೇಣಿಗೆ ಹಣದ ಅಕ್ರಮ ಬಳಕೆ ಮತ್ತು ಕಳ್ಳತನದ ಆರೋಪಗಳು ಭಾರೀ ಚರ್ಚೆಗೆ ಗ್ರಾಸವಾಗಿದ್ದ ಹಿನ್ನೆಲೆಯಲ್ಲಿ, ನೈತಿಕ ಹೊಣೆ ಹೊತ್ತು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಠಿಣ ನಿಲುವು ಹಾಗೂ ವಿಶೇಷ ತನಿಖಾ ತಂಡದ (ಎಸ್‌ಐಟಿ) ಪ್ರಾಥಮಿಕ ವರದಿ ಬಳಿಕ ರಾಜೀನಾಮೆ ಸಲ್ಲಿಸಲಾಗಿದೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಎಂಟು ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ದೇಣಿಗೆ ನಗದು ಎಣಿಕೆ ಸಿಬ್ಬಂದಿ, ಎಣಿಕೆ ಕಾರ್ಯಾಚರಣೆಯ ಮುಖ್ಯಸ್ಥ, ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸಿದ್ದ ನಿವೃತ್ತ ಬ್ಯಾಂಕರ್ ಹಾಗೂ ಚಂಪತ್ ರಾಯ್ ಅವರ ಆಪ್ತ ಸಹಚರ ಮತ್ತು ಚಾಲಕ ರಾಮಶಂಕರ್ ಯಾದವ್ ಅಲಿಯಾಸ್ ತಿನ್ನು ಸೇರಿದ್ದಾರೆ.

ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಸಲ್ಲಿಸಿದ ಬಳಿಕ, ಟ್ರಸ್ಟ್‌ನ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕಳ್ಳತನ, ನಂಬಿಕೆ ದ್ರೋಹ, ವಂಚನೆ ಹಾಗೂ ಕ್ರಿಮಿನಲ್ ಸಂಚು ಸೇರಿದಂತೆ ವಿವಿಧ ಗಂಭೀರ ಆರೋಪಗಳನ್ನು ಹೊರಿಸಲಾಗಿದೆ.

Post a Comment

0 Comments

ಜಾಹೀರಾತು

Responsive Advertisement