Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಮುರತ್ತಣೆಯ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

 

ಮಂಜೇಶ್ವರ : ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ಮುರತ್ತಣೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕ್ಲಬ್ಬಿನ ಗೌರವಾಧ್ಯಕ್ಷ ಕೃಷ್ಣ ಮೇಸ್ತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಘುನಾಥ್ ಮೊರತ್ತಣೆ 2025-26 ರ ಲೆಕ್ಕ ಪತ್ರ ಮಂಡಿಸಿದರು. ಬಳಿಕ ಕ್ಲಬ್ಬಿನ ಸಮಾಜಮುಖಿ ಕಾರ್ಯದ ಬಗ್ಗೆ ಹಾಗೂ 20 ನೇ ವರ್ಷದ ವಾರ್ಷಿಕೋತ್ಸವ ಬಗ್ಗೆ ಚರ್ಚಿಸಲಾಯಿತು.

ಬಳಿಕ ನಡೆದ ಪದಾಧಿಕಾರಿಗಳ ಆಯ್ಕೆಯಲ್ಲಿ ಅಧ್ಯಕ್ಷರಾಗಿ ಚರಣ್ ರಾಜ್, ಉಪಾಧ್ಯಕ್ಷರಾಗಿ ಪ್ರಶಾಂತ್, ಕಾರ್ಯದರ್ಶಿಯಾಗಿ ಆಶೀಶ್, ಜತೆ ಕಾರ್ಯದರ್ಶಿಯಾಗಿ ಪ್ರತಾಪ್  ಮುರತ್ತಣೆ, ಕೋಶಾಧಿಕಾರಿಯಾಗಿ ಲೋಕೇಶ್ ಮುರತ್ತಣೆ, ಕ್ರೀಡಾ ಕಾರ್ಯದರ್ಶಿಯಾಗಿ ಶ್ರವಣ್ ಮುರತ್ತಣೆ, ಜತೆ ಕ್ರೀಡಾ ಕಾರ್ಯದರ್ಶಿಯಾಗಿ ರಾಧಕೃಷ್ಣ ಮುರತ್ತಣೆ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೃಷ್ಣ ಮೇಸ್ತ್ರಿ ಮುರತ್ತಣೆ, ಜಯರಾಮ್ ಮುರತ್ತಣೆ, ರಘುನಾಥ್ ಮುರತ್ತಣೆ, ಗಂಗಾ ಮುರತ್ತಣೆ, ಚೇತನ್ ಮುರತ್ತಣೆ, ಉಮೇಶ್ ಮುರತ್ತಣೆ, ಪ್ರವೀಣ್ ಮುರತ್ತಣೆಯವರನ್ನು ಆರಿಸಲಾಯಿತು. ಶಿವಕುಮಾರ್ ಸ್ವಾಗತಿಸಿದರು.

Post a Comment

0 Comments


ಜಾಹೀರಾತು

Responsive Advertisement