ಕಾಸರಗೋಡು : ಜಿಲ್ಲೆಯ ಎಲ್ಲಾ ರಸ್ತೆಗಳಲ್ಲಿ ಶಾಲಾ ಸಮಯದ ದಿನಗಳಲ್ಲಿ ನಿಯಂತ್ರಣ ಹೇರಲಾಗಿದೆ.  ಬೆಳಿಗ್ಗೆ 8 ರಿಂದ 10 ರವರೆಗೆ ಮತ್ತು ಮಧ್ಯಾಹ್ನ 3.30 ರಿಂದ ಸಂಜೆ 5 ರವರೆಗೆ ಟಿಪ್ಪರ್ ಲಾರಿಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕಾಸರಗೋಡು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಶಾಲಾ ಸಮಯದಲ್ಲಿ ನಾಗಲೋಟದ ಸಂಚಾರ ನಡೆಸುವ ಟಿಪ್ಪರ್ ಲಾರಿಗಳಿಂದ ಅಪಘಾತ ಉಂಟಾಗುತ್ತಿರುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ.