ಕಾಸರಗೋಡು : ಆಲುವದಿಂದ ಕಾಣೆಯಾದ ಎಂಟನೇ ತರಗತಿ ವಿದ್ಯಾರ್ಥಿನಿಯಾಗಿರುವ 12 ವರ್ಷದ ಬಾಲಕಿಯನ್ನು ಯಾರೋ ಅಪಹರಿಸಿದ್ದಾರೆ ಎಂಬ ಅನುಮಾನವಿದ್ದು, ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಬೇಕು ಎಂದು ಕುಟುಂಬ ಒತ್ತಾಯಿಸಿದೆ.
ಕಳೆದ ಶನಿವಾರ ರಾತ್ರಿ ಸುಮಾರು 8.30ರ ವೇಳೆಗೆ ಬಾಲಕಿ ನಾಪತ್ತೆಯಾಗಿದ್ದಾಳೆ. ಸ್ನೇಹಿತೆಯಿಂದ ಪುಸ್ತಕ ತರಲು ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಬಾಲಕಿ ಬಳಿಕ ಮನೆಗೆ ಮರಳಿರಲಿಲ್ಲ. ನಂತರ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು.
ನಾಪತ್ತೆಯಾಗುವ ವೇಳೆ ಬಾಲಕಿಯ ಬಳಿ ತಾಯಿಯ ಮೊಬೈಲ್ ಫೋನ್ ಇತ್ತು. ಮೊದಲು ಫೋನ್ ಸ್ವಿಚ್ ಆಫ್ ಆಗಿದ್ದರೂ, ಬಳಿಕ ಆಗಾಗ್ಗೆ ಆನ್ ಆಗಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಬೈಲ್ ಫೋನ್ ಲೊಕೇಶನ್ ಆಧಾರದಲ್ಲಿ ಪೊಲೀಸರು ತನಿಖೆಗೆ ತೊಡಗಿದಾಗ ಮೊದಲು ಕಾಸರಗೋಡು, ಬಳಿಕ ಮಂಗಳೂರು ನಂತರ ಮುಂಬೈ ಪ್ರದೇಶಗಳಲ್ಲಿ ಫೋನ್ ಸಿಗ್ನಲ್ ಪತ್ತೆಯಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ತನಿಖೆಯನ್ನು ಕೇರಳದ ಹೊರಗೂ ವಿಸ್ತರಿಸಲಾಗಿದೆ.
ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್
https://www.instagram.com/visheshachannel/
https://www.facebook.com/profile.php?id=61572771802334
https://www.linkedin.com/in/visheshachannel/
www.youtube.com/@VisheshaChannelofficial
#news #viral #blogger #viralnews #dailypost

0 Comments