ಕಳತ್ತೂರು: ಮದ್ಯ ವ್ಯಸನದಿಂದಾಗಿ ಸಮಾಜದಲ್ಲಿ ಎಷ್ಟೋ ಕುಟುಂಬಗಳು ನಲುಗಿಹೋಗಿದೆ ಇದರಿಂದಾಗಿಯೇ ದಾರಿದ್ರ್ಯವನ್ನು ಅನುಭವಿಸುವ ಕುಟುಂಬಗಳಿವೆ ಪೂಜ್ಯ ಹೆಗ್ಗಡೆಯವರ ಈ ಸತ್ಕಾರ್ಯದಿಂದ ವ್ಯಸನಮುಕ್ತ ಸಮಾಜ ನಿರ್ಮಾಣವಾಗಲಿ ಎಂದು ಬ್ರಹ್ಮಶ್ರೀ ಚಕ್ರಪಾಣಿ ದೇವಪೂಜಿತ್ತಾಯ ಆರಿಕ್ಕಾಡಿ ಅಭಿಪ್ರಾಯಪಟ್ಟರು ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 2080ನೇ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಕಳತ್ತೂರು,ಮಂಜೇಶ್ವರ ತಾಲೂಕು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಬೆಳ್ತಂಗಡಿ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ.), ಮಂಜೇಶ್ವರ ತಾಲೂಕು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕಳತ್ತೂರಿನ ಶ್ರೀ ಮಹಾದೇವ ಭಜನಾ ಮಂದಿರದಲ್ಲಿ ನಡೆಯುತ್ತಿರುವ 2080ನೇ ಮದ್ಯವರ್ಜನ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟನೆಮಾಡಿ ಮಾತನಾಡಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮಂಜೇಶ್ವರ ತಾಲೂಕು ಅಧ್ಯಕ್ಷ ಮಂಜುನಾಥ ಆಳ್ವ ಮಡ್ವ ಅಧ್ಯಕ್ಷತೆ ವಹಿಸಿದ್ದರು. ಕುಂಬಳೆ ಗ್ರಾಮ ಪಂಚಾಯತ್ ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್, ಜಿಲ್ಲಾ ಪಂಚಾಯತ್ ಸದಸ್ಯ ಅಝೀಝ್ ಕಳತ್ತೂರು, ಕುಂಬಳೆ ಗ್ರಾಮ ಪಂಚಾಯತ್ ಸದಸ್ಯ ಸುಕೇಶ್ ಭಂಡಾರಿ, ಪುತ್ತಿಗೆ ಗ್ರಾಮ ಪಂಚಾಯತ್ ಸದಸ್ಯ ಬಾಲಕೃಷ್ಣ ರೈ, ಮಧ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಪ್ರಸಾದ್ ರೈ ಕಾರಿಂಜ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ದಕ್ಷಿಣ ಕನ್ನಡ–2 ಜಿಲ್ಲೆ ನಿರ್ದೇಶಕ ಬಾಬು ನಾಯ್ಕ, ಧಾರ್ಮಿಕ ಮುಖಂಡ ಯೋಗಿಶ್ ಕಡಮಣ್ಣಾಯ, ಮಧ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿಯ ಗೌರವಾಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪೂಕಟ್ಟೆ, ಕ್ಷೀರೋತ್ಪಾದನ ಸಹಕಾರಿ ಸಂಘದ ಅಧ್ಯಕ್ಷ ಶಿವರಾಮ್ ಭಟ್ ಕಾರಿಂಜ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಂಜೇಶ್ವರ ತಾಲೂಕು ಅಧ್ಯಕ್ಷ ಉದಯಕುಮಾರ್ ಆನೆಬಾಗಿಲು, ಕುಂಬಳೆ ಗ್ರಾಮ ಪಂಚಾಯತ್ ಸದಸ್ಯೆ ಅಮಿತಾ ದೇವದಾಸ್ ಆಳ್ವ, ಶಿಬಿರ ವ್ಯವಸ್ಥಾಪನಾ ಸಮಿತಿ ಕೋಶಾಧಿಕಾರಿ ನರಹರಿ ಮಾಸ್ಟರ್ ಹಾಗೂ ಶ್ರೀನಿವಾಸ ಆಳ್ವ ಕಳತ್ತೂರು ಮುಖ್ಯ ಅತಿಥಿಗಳಾಗಿದ್ದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ.) ವಲಯಾಧ್ಯಕ್ಷ ಮಹೇಶ್ ಪುಣಿಯೂರು ಹಾಗೂ ಶ್ರೀ ಮಹಾದೇವ ಸಭಾಭವನ ಕಳತ್ತೂರು ಅಧ್ಯಕ್ಷ ಬಾಲಕೃಷ್ಣ ನೆಲ್ಯಡ್ಕ ಗೌರವ ಉಪಸ್ಥಿತರಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮಂಜೇಶ್ವರ ಯೋಜನಾಧಿಕಾರಿ ಶಶಿಕಲಾ ಸುವರ್ಣ ಸ್ವಾಗತಿಸಿ, ಕುಂಬಳೆ ವಲಯದ ಮೇಲ್ವಿಚಾರಕ ಅಭಿಷೇಕ್ ಡಿ. ವಂದಿಸಿದರು.

0 Comments