ಅಡೂರು: ಮೊಗೇರ ಸಮುದಾಯ ಸೇವಾ ಸಂಘ (ರಿ.), ಅಡೂರು ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 9 A+ ಹಾಗೂ +2 ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ A+ ಪಡೆದಿರುವ ಮೊಗೇರ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ತಮ್ಮ ಸ್ವವಿವರ ಹೊಂದಿರುವ ಅರ್ಜಿಯೊಂದಿಗೆ ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ ಹಾಗೂ ಅಂಕಪಟ್ಟಿಯ ಪ್ರತಿಯನ್ನು ಲಗತ್ತಿಸಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ 25, 2026 ಕೊನೆಯ ದಿನಾಂಕವಾಗಿದೆ. ಅರ್ಜಿಗಳನ್ನು ಕಾರ್ಯದರ್ಶಿ ಚಂದ್ರ ಸಿ.ಬಿ., ಮೊಗೇರ ಸಮುದಾಯ ಸೇವಾ ಸಂಘ (ರಿ.), ಅಡೂರು ಇವರಿಗೆ ಕಳುಹಿಸುವಂತೆ ಸಂಘ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ 70343 66424 ಅಥವಾ 73562 30778 ಸಂಖ್ಯೆಗೆ ಸಂಪರ್ಕಿಸಬಹುದು.
.png)
0 Comments