Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಎಪಿಎಸ್‌ಆರ್‌ಟಿಸಿ ಬಸ್–ಲಾರಿ ಡಿಕ್ಕಿ; ಚಾಲಕ ಸಹಿತ ಇಬ್ಬರು ಮೃತ್ಯು

ಚಿಕ್ಕಬಳ್ಳಾಪುರ : ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-44)ಯ ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪೈಲಗುರ್ಕಿ ಸಮೀಪ ಮಂಗಳವಾರ ಮುಂಜಾನೆ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎಪಿಎಸ್‌ಆರ್‌ಟಿಸಿ) ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಕರ್ನೂಲಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಬಸ್, ಮುಂಭಾಗದಲ್ಲಿ ಸಂಚರಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಬಸ್ ಚಾಲಕ ಲಕ್ಷ್ಮಣ್ (52) ಹಾಗೂ ಬೆಂಗಳೂರಿನ ಕಲ್ಯಾಣನಗರ ನಿವಾಸಿ, ಉಮಾಕಾಂತ್ ರಾವ್ (77) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲವಾರು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆ ಸೇರಿದಂತೆ ಸಮೀಪದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಡಿಕ್ಕಿಯ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಕ್ಯಾಬಿನ್‌ನಲ್ಲೇ ಸಿಲುಕಿಕೊಂಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಕ್ರೇನ್‌ ಸಹಾಯದಿಂದ ಬಸ್‌ನ ಮುಂಭಾಗವನ್ನು ತೆರವುಗೊಳಿಸಿ ಚಾಲಕರ ಮೃತದೇಹವನ್ನು ಹೊರತೆಗೆದರು. ಮತ್ತೊಬ್ಬ ಮೃತ ಪ್ರಯಾಣಿಕನ ಶವವನ್ನು ಬಸ್‌ನ ಕಿಟಕಿಯ ಮೂಲಕ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೇರೆಸಂದ್ರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅಪಘಾತಕ್ಕೀಡಾದ ಬಸ್ ಹಾಗೂ ಲಾರಿಯನ್ನು ತೆರವುಗೊಳಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಪುನಃ ಸುಗಮಗೊಳಿಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ಕಾರಣ ಕುರಿತು ತನಿಖೆ ಮುಂದುವರಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement