ಪೆರ್ಲ : "ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಸಾಧನೆಗಷ್ಟೇ ಸೀಮಿತವಾಗದೆ, ವ್ಯಕ್ತಿತ್ವ ವಿಕಸನಕ್ಕೂ ಹೆಚ್ಚಿನ ಮಹತ್ವ ನೀಡಬೇಕು. ಕಾಲೇಜು ಜೀವನದಲ್ಲಿ ಸಿಗುವ ಪ್ರತಿಯೊಂದು ಅವಕಾಶಗಳನ್ನೂ ಸದುಪಯೋಗಪಡಿಸಿಕೊಳ್ಳಬೇಕು" ಎಂದು ಪೆರ್ಲ ನಾಲಂದ ಕಾಲೇಜಿನ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸತೀಶ್ ಪುಣಿಂಚಿತ್ತಾಯ ಅವರು ಕರೆ ನೀಡಿದರು.
ನಾಲಂದ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳನ್ನು ಸ್ವಾಗತಿಸುವ 'ಆಗಮನಂ' ಫ್ರೆಶರ್ಸ್ ಡೇ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಿನ್ಸಿಪಾಲ್ ಡಾ. ಮೋಹನ ಕುಂಟಾರ್ ಅವರು ಮಾತನಾಡಿ, "ವಿದ್ಯಾರ್ಥಿಗಳಲ್ಲಿ ಜ್ಞಾನಾರ್ಜನೆಯ ಜೊತೆಗೆ ಉತ್ತಮ ಸ್ನೇಹ ಮನೋಭಾವ ಮತ್ತು ಸಾಮಾಜಿಕ ಪ್ರಜ್ಞೆಯನ್ನು ಮೂಡಿಸುವಲ್ಲಿ ಶೈಕ್ಷಣಿಕ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತವೆ" ಎಂದು ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಸಂಯೋಜಕಿ ವಿನೀಶಾ ಎಸ್.ವಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ವೈಸ್ ಪ್ರಿನ್ಸಿಪಾಲ್ ಶಂಕರ ಖಂಡಿಗೆ ಹಾಗೂ ಕಾಲೇಜು ಸಿಬ್ಬಂದಿ ಕಾರ್ಯದರ್ಶಿ ಶಿಲ್ಪಾ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪ್ರಾರ್ಥನಾ ಸ್ವಾಗತಿಸಿ, ಅನಘಾ ವಿ. ಧನ್ಯವಾದ ಸಮರ್ಪಿಸಿದರು. ಆಯಿಷತ್ ಇಸಾನಾ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಪ್ರಥಮ ವರ್ಷದ ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿಗಳು ನೃತ್ಯ, ಗಾಯನ ಹಾಗೂ ವಿವಿಧ ಮನರಂಜನಾ ಪ್ರದರ್ಶನಗಳ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.
ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್
https://www.instagram.com/visheshachannel/
https://www.facebook.com/profile.php?id=61572771802334
https://www.linkedin.com/in/visheshachannel/
www.youtube.com/@VisheshaChannelofficial
#news #viral #blogger #viralnews #dailypost
*ವೈನ್ ಶಾಪ್ಗೆ ಚಿರತೆ ಎಂಟ್ರಿ..! 'ಒಂದು ಪೆಗ್ ಕೊಡ್ತೀರಾ?'*
https://www.instagram.com/reel/DbIAC1OMtdy/?utm_source=ig_web_copy_link&igsh=MzRlODBiNWFlZA==
https://www.facebook.com/share/r/1GbNRR1ekL/
ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್.

0 Comments