Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕುಂಬಳೆ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ 15 ವರ್ಷದ ವಿದ್ಯಾರ್ಥಿಯ ಅಪಹರಣ ಆರೋಪ : ಮೂವರ ವಿರುದ್ಧ ಕೇಸು

ಕುಂಬಳೆ : ಶಾಲಾ ವಿದ್ಯಾರ್ಥಿಯನ್ನು ಅಪಹರಿಸಿದ ಆರೋಪದಡಿ ಕುಂಬಳೆ  ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕುಂಬಳೆ  ಪೊಲೀಸ್ ಠಾಣೆ ವ್ಯಾಪ್ತಿಯ 15 ವರ್ಷದ ವಿದ್ಯಾರ್ಥಿ ನೀಡಿದ ದೂರಿನ ಮೇರೆಗೆ ಪ್ರಮುಖ ಆರೋಪಿ ಸಮಾನ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ದೂರಿನ ಪ್ರಕಾರ, ಸೋಮವಾರ ಮಧ್ಯಾಹ್ನ ಸುಮಾರು 12.45 ಗಂಟೆಗೆ ಕುಂಬಳೆಯ ಹೋಟೆಲೊಂದರ ಸಮೀಪ  ನಿಂತಿದ್ದ ವೇಳೆ ವಿದ್ಯಾರ್ಥಿಯನ್ನು, ಸ್ಕೂಟರ್‌ನಲ್ಲಿ ಬಂದ ತಂಡ ಬಲವಂತವಾಗಿ ಕರೆದೊಯ್ದು, ಬಳಿಕ ಬೇರೆಡೆಗೆ ಕರೆದುಕೊಂಡು ಹೋಗಿ ಇಳಿಸಿ ಬಿಟ್ಟಿದೆ ಎನ್ನಲಾಗಿದೆ.

ಇದಲ್ಲದೆ, ಜೂನ್ ತಿಂಗಳಲ್ಲಿ ಶಾಲೆ ಆರಂಭವಾಗಿ ಎರಡು ವಾರಗಳಾದ ನಂತರ ಇದೇ ತಂಡ ಕಾರಿನಲ್ಲಿ ವಿದ್ಯಾರ್ಥಿಯನ್ನು ಅಪಹರಿಸಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕುಂಬಳೆ  ಪೊಲೀಸರು ಆರೋಪಿಗಳ ಪತ್ತೆ ಹಾಗೂ ಘಟನೆಯ ಹಿನ್ನೆಲೆ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement