Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಬಂದಡ್ಕ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ರ‍್ಯಾಲಿ, ನೃತ್ಯರೂಪಕ

ಬಂದಡ್ಕ: ‘ಆಪರೇಷನ್ ತೂಫಾನ್’ ಮಾದಕ ದ್ರವ್ಯ ವಿರೋಧಿ ಅಭಿಯಾನದ ಅಂಗವಾಗಿ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ (ಜಿ.ಎಚ್.ಎಸ್.ಎಸ್.) ಬಂದಡ್ಕದಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ರ‍್ಯಾಲಿ ಹಾಗೂ ನೃತ್ಯರೂಪಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮಕ್ಕೆ ಬೇಡಗಂ ಪೊಲೀಸ್ ಠಾಣೆಯ ಎಸ್‌ಎಚ್‌ಒ ವಿನೋದ್ ಕುಮಾರ್ ಕೆ.ಪಿ. ಚಾಲನೆ ನೀಡಿದರು. ಬಳಿಕ ವಿದ್ಯಾರ್ಥಿಗಳ ಜಾಗೃತಿ ರ‍್ಯಾಲಿಯು ಶಾಲಾ ಆವರಣದಿಂದ ಮಾದಕ ದ್ರವ್ಯ ವಿರೋಧಿ ಜ್ಯೋತಿಯೊಂದಿಗೆ ಆರಂಭವಾಗಿ ಬಂದಡ್ಕ ಪೇಟೆಯವರೆಗೆ ಸಂಚರಿಸಿತು. ರ‍್ಯಾಲಿಯಲ್ಲಿ ಎಸ್‌ಪಿಸಿ, ಜೆಆರ್‌ಸಿ, ಲಿಟಲ್ ಕೈಟ್ಸ್, ಸ್ಕೌಟ್ಸ್ ಅಂಡ್ ಗೈಡ್ಸ್ ಹಾಗೂ ಎನ್‌ಎಸ್‌ಎಸ್ ಘಟಕಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಮಾದಕ ದ್ರವ್ಯದ ದುಷ್ಪರಿಣಾಮಗಳ ಬಗ್ಗೆ ಜನಜಾಗೃತಿ ಮೂಡಿಸಿದರು.

ರ‍್ಯಾಲಿಯ ಬಳಿಕ ವಿದ್ಯಾರ್ಥಿಗಳಿಂದ ಮಾದಕ ದ್ರವ್ಯ ವಿರೋಧಿ ಸಂದೇಶ ಸಾರುವ ನೃತ್ಯರೂಪಕ ಪ್ರದರ್ಶನ ನಡೆಯಿತು. ಕಾರ್ಯಕ್ರಮದ ಅಂತ್ಯದಲ್ಲಿ ಆಯೋಜಿಸಲಾದ ಮಾದಕ ದ್ರವ್ಯ ವಿರೋಧಿ ಪ್ರತಿಜ್ಞಾ ವಿಧಿಯಲ್ಲಿ ಸ್ಥಳೀಯ ನಿವಾಸಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಕೈಗೊಂಡರು.

ಈ ಸಂದರ್ಭದಲ್ಲಿ ಎಕ್ಸೈಸ್ ಅಧಿಕಾರಿಗಳಾದ ಜನಾರ್ದನ್ ಕೆ., ಜೋಬಿ ಕೆ.ಪಿ., ಗೋಪಿ ಕೆ. ಸೇರಿದಂತೆ ಹಲವರು ಉಪಸ್ಥಿತರಿದ್ದರು.

Post a Comment

0 Comments

ಜಾಹೀರಾತು

Responsive Advertisement