Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಯತ್ನ : ಮಗಳನ್ನು ರಕ್ಷಿಸಲು ಆರೋಪಿಯ ಕಾಲು ಮುರಿದ ತಂದೆ

ತಿರುವನಂತಪುರ : 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ನೆರೆಮನೆಯ ವ್ಯಕ್ತಿಯ ಕಾಲು ಮುರಿದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಬಾಲಕಿಯ ಹೇಳಿಕೆ ಆಧರಿಸಿ ಇದೀಗ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಘಟನೆ ತಿರುವನಂತಪುರ ಪೊತ್ತನ್‌ಕೋಡ್‌ನಲ್ಲಿ ಸೋಮವಾರ ನಡೆದಿದ್ದು, 40 ವರ್ಷದ ನೆರೆಮನೆಯ ವ್ಯಕ್ತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿಯನ್ನು ತನ್ನ ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಈ ವೇಳೆ ಅಲ್ಲಿಗೆ ಬಂದ ಬಾಲಕಿಯ ತಂದೆ ಮಗಳನ್ನು ರಕ್ಷಿಸಲು ಮರದ ತುಂಡಿನಿಂದ ಆರೋಪಿಗೆ ಹೊಡೆದಿದ್ದು, ಪರಿಣಾಮ ಆರೋಪಿಯ ಕಾಲು ಮುರಿದಿದೆ.

ಆದರೆ, ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿ ಪೊಲೀಸರಿಗೆ ದೂರು ನೀಡಿದ್ದರಿಂದ, ಪೊಲೀಸರು ಬಾಲಕಿಯ ತಂದೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ನಂತರ ಬಾಲಕಿಯ ಹೇಳಿಕೆ ದಾಖಲಿಸಿದ ವೇಳೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಕಾರಣದಿಂದಲೇ ತಂದೆ ಆರೋಪಿಯ ಮೇಲೆ ಹಲ್ಲೆ ನಡೆಸಿದ್ದ ವಿಚಾರ ಬೆಳಕಿಗೆ ಬಂದಿದೆ. ಇದರ ಆಧಾರದಲ್ಲಿ ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿರುವ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸುವುದಾಗಿ ತಿಳಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement