ಆದೂರು: ಪೇಂಟಿಂಗ್ ಕೆಲಸ ಮಾಡುತ್ತಿದ್ದ ಯುವಕನೊಬ್ಬನ ಮೃತದೇಹ ಮನೆಯೊಳಗೆ ಮಲಗುವ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಅಡೂರು ಅಡುಕ್ಕಂ ಚಕ್ಕೋಟ್ ಹೌಸ್‌ನ ಅಭಿಲಾಷ್ (28) ಎಂದು ಗುರುತಿಸಲಾಗಿದೆ.
ಕಳೆದ ನಾಲ್ಕು ದಿನಗಳಿಂದ ಅವರು ಕೆಲಸಕ್ಕೆ ಹೋಗಿರಲಿಲ್ಲ. ಇಂದು ಬೆಳಿಗ್ಗೆ ಸುಮಾರು 10 ಗಂಟೆಯಾದರೂ ಮಲಗುವ ಕೋಣೆಯ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಮನೆಯವರು ಪರಿಶೀಲಿಸಿದಾಗ, ಅವರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದರು.
ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದರು. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಿ ಆದೂರು ಪೊಲೀಸರ ನೇತೃತ್ವದಲ್ಲಿ ಮಹಜರು ನಡೆಸಲಾಗಿದೆ ಮೃತ ಅಭಿಲಾಷ್ ಅವಿವಾಹಿತರಾಗಿದ್ದು, ತಂದೆ ಅಪ್ಪಕುಂಞಿ ಹಾಗೂ ತಾಯಿ ಯಶೋದ ಸಹೋದರರಾದ ಅಭಿಷೇಕ್ ಮತ್ತು ಅಶ್ವತಿ ಎಂಬಿವರನ್ನಗಲಿದ್ದಾರೆ.
ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್
https://www.instagram.com/visheshachannel/
https://www.facebook.com/profile.php?id=61572771802334
https://www.linkedin.com/in/visheshachannel/
www.youtube.com/@VisheshaChannelofficial
#news #viral #blogger #viralnews #dailypost

0 Comments