Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕಾರು–ಬೈಕ್ ಡಿಕ್ಕಿ: ಬೈಕ್ ಸವಾರ ಮೃತ್ಯು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಬೋಳಂಗಡಿ ನರಹರಿ ಪರ್ವತ ಸಮೀಪ, ಪಾಣೆಮಂಗಳೂರು–ಮೆಲ್ಕಾರ್ ನಡುವಿನ ರಸ್ತೆಯಲ್ಲಿ ಭಾನುವಾರ ಸಂಜೆ ಸಂಭವಿಸಿದ ಕಾರು–ಬೈಕ್ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.

ಮೃತರನ್ನು ಪುತ್ತೂರು ನಿವಾಸಿ ಅಶೋಕ್ (34) ಎಂದು ಗುರುತಿಸಲಾಗಿದೆ.

ಬಿ.ಸಿ.ರೋಡ್ ಕಡೆಗೆ ತೆರಳುತ್ತಿದ್ದ ಮಾರುತಿ ಕಾರಿಗೆ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬೈಕ್ ಸವಾರ ಒನ್‌ವೇ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ಕಾರಣ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಹಾಗೂ ಕಾರು ಎರಡೂ ಜಖಂಗೊಂಡಿವೆ. ಗಂಭೀರವಾಗಿ ಗಾಯಗೊಂಡ ಅಶೋಕ್ ಅವರನ್ನು ಸ್ಥಳೀಯರು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement