ಬೆಳ್ತಂಗಡಿ : ಮನೆ ಎದುರಿನ ಮರಕ್ಕೆ ನೇಣು ಬಿಗಿದು ಕಾಲೇಜು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಿರುದ್ಯಾವರ ಗ್ರಾಮದಲ್ಲಿ ಬುಧವಾರ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ನಿಖಿತಾ (19) ಎಂದು ಗುರುತಿಸಲಾಗಿದೆ. ಅವರು ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದರು.
ತಾಯಿ ಮತ್ತು ಮಗಳು ಇಬ್ಬರೇ ಮನೆಯಲ್ಲಿ ವಾಸವಾಗಿದ್ದರು. ಬುಧವಾರ ಬೆಳಿಗ್ಗೆ ತಾಯಿ ಕೆಲಸಕ್ಕೆ ತೆರಳಿದ ಬಳಿಕ ಮನೆಯಲ್ಲಿ ಒಬ್ಬಳೇ ಇದ್ದ ನಿಖಿತಾ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

0 Comments