Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಆತ್ಮಹತ್ಯೆಗೆ ಯತ್ನಿಸಿದ್ದ ಕಮ್ಯೂನಿಟಿ ಹೆಲ್ತ್ ಆಫೀಸರ್ ಚಿಕಿತ್ಸೆ ಫಲಿಸದೆ ಸಾವು

ಪುತ್ತೂರು : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಮ್ಯೂನಿಟಿ ಹೆಲ್ತ್ ಆಫೀಸರ್ ಓರ್ವೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಮೃತರನ್ನು ಬೆಟ್ಟಂಪಾಡಿ ಗ್ರಾಮದ ಮಿತ್ತಡ್ಕದ ದಿ. ಹೆಗ್ಗಡೇಶ ಗೌಡ ಅವರ ಪುತ್ರಿ ಪ್ರಜ್ಞಾ (26) ಎಂದು ಗುರುತಿಸಲಾಗಿದೆ. ಅವರು ಆರೋಗ್ಯ ಇಲಾಖೆಯಲ್ಲಿ ಬಡಗನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮುದಾಯ ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಜೂನ್ 21ರಂದು ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 27 ದಿನಗಳಿಂದ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೆ ನಿನ್ನೆ ಸಂಜೆ ಕೊನೆಯುಸಿರೆಳೆದಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಮೃತರು ತಾಯಿ ಬೇಬಿ ಹಾಗೂ ಸಹೋದರಿ ದೀಕ್ಷಾ ಅವರನ್ನು ಅಗಲಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement