Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ರೈಲು ನಿಲ್ದಾಣದಲ್ಲಿ ಕಾಮಗಾರಿ ವೇಳೆ ಹಳಿಗೆ ಉರುಳಿದ ಕ್ರೇನ್ : ಸಂಚಾರ ವ್ಯತ್ಯಯ

ತಿರುವನಂತಪುರ : ತಂಬಾನೂರು ರೈಲು ನಿಲ್ದಾಣದಲ್ಲಿ ನಿರ್ಮಾಣ ಕಾಮಗಾರಿ ವೇಳೆ ಕ್ರೇನ್ ಏಕಾಏಕಿ ರೈಲು ಹಳಿಯ ಮೇಲೆ ಉರುಳಿದ ಪರಿಣಾಮ ಕೆಲಕಾಲ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ರೈಲ್ವೆಯ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಹಳೆಯ ಕಟ್ಟಡವನ್ನು ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಕ್ರೇನ್ ನಿಯಂತ್ರಣ ತಪ್ಪಿ ನಿಲ್ದಾಣದ ಮೊದಲನೇ ಪ್ಲಾಟ್‌ಫಾರ್ಮ್ ಮೇಲ್ಭಾಗಕ್ಕೆ ಉರುಳಿದೆ.

ಅವಘಡದ ಪರಿಣಾಮ ಮೊದಲನೇ ಪ್ಲಾಟ್‌ಫಾರ್ಮ್ ಮೂಲಕ ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಇತರೆ ಹಳಿಗಳ ಮೂಲಕ ರೈಲುಗಳು  ಸಂಚರಿಸುತ್ತಿವೆ. ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉರುಳಿದ ಕ್ರೇನ್ ಅನ್ನು ಶೀಘ್ರದಲ್ಲೇ ತೆರವುಗೊಳಿಸಿ, ಮೊದಲನೇ ಪ್ಲಾಟ್‌ಫಾರ್ಮ್‌ನಲ್ಲಿನ ರೈಲು ಸಂಚಾರವನ್ನು ಯಥಾಸ್ಥಿತಿಗೆ ತರಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ.

Post a Comment

0 Comments

ಜಾಹೀರಾತು

Responsive Advertisement