Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ವಿಷ ಪ್ರಾಶನಗೈದು ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಕಾಸರಗೋಡು : ವಿಷ ಸೇವಿಸಿ  ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 19 ವರ್ಷದ ಯುವತಿ ಮೃತಪಟ್ಟ ಘಟನೆ ಬೇಡಡ್ಕದ ತೋರೊತ್‌ನಲ್ಲಿ ನಡೆದಿದೆ. ಮೃತಳನ್ನು ತೋರೊತ್ ನಿವಾಸಿ ಟಿ. ಅಶೋಕನ್ ಅವರ ಪುತ್ರಿ ಟಿ. ಅನಶ್ವರ (19) ಎಂದು ಗುರುತಿಸಲಾಗಿದೆ.

ಪ್ಲಸ್ ಟು ಶಿಕ್ಷಣ ಪೂರ್ಣಗೊಳಿಸಿದ ಬಳಿಕ ಉನ್ನತ ಶಿಕ್ಷಣಕ್ಕೆ ಸಿದ್ಧತೆ ನಡೆಸುತ್ತಿದ್ದ ಅನಶ್ವರ ವಿಷ ಸೇವಿಸಿದ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಸುಮಾರು 10.30ರ ವೇಳೆಗೆ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement