Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಪತ್ನಿ ದೂರವಾದ ದ್ವೇಷಕ್ಕೆ ಮಕ್ಕಳಿಗೆ ವಿಷ ನೀಡಿದ ತಂದೆ; ಚಿಕಿತ್ಸೆ ಪಡೆಯುತ್ತಿದ್ದ 7 ವರ್ಷದ ಬಾಲಕಿ ಸಾವು

ತ್ರಿಶೂರ್ : ಪತ್ನಿ ದೂರವಾದ ದ್ವೇಷದಿಂದ ಮಕ್ಕಳಿಗೆ ಜ್ಯೂಸ್‌ನಲ್ಲಿ ಇಲಿ ವಿಷ ಬೆರೆಸಿ ಕುಡಿಸಿದ್ದ ತಂದೆಯ ಕೃತ್ಯದಿಂದ ಅಸ್ವಸ್ಥಗೊಂಡು ಚಿಕಿತ್ಸೆ  ಪಡೆಯುತ್ತಿದ್ದ  7 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಮೃತ ಬಾಲಕಿಯನ್ನು ಋತಿಕಾ (7) ಎಂದು ಗುರುತಿಸಲಾಗಿದೆ. ಆಕೆಯ ತಂದೆ ತಮಿಳುನಾಡು ಮೂಲದ ಮುತ್ತು (29). ಇಲಿ ವಿಷ ಸೇವಿಸಿದ್ದ ಋತಿಕಾ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದು, ಆಕೆಯ ಕಿರಿಯ ಸಹೋದರ ಋತಿನ್ ಇನ್ನೂ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಪತ್ನಿ ಮನೆ ಬಿಟ್ಟು ತೆರಳಿದ್ದರಿಂದ ಉಂಟಾದ ದ್ವೇಷದ ಹಿನ್ನೆಲೆಯಲ್ಲಿ ಮುತ್ತು ತನ್ನ ಇಬ್ಬರು ಮಕ್ಕಳಿಗೆ ಜ್ಯೂಸ್‌ನಲ್ಲಿ ಇಲಿ ವಿಷ ಬೆರೆಸಿ ಕುಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಕ್ಕಳನ್ನು ಮೊದಲಿಗೆ ತ್ರಿಶೂರ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಇಂದು ಮುಂಜಾನೆ ಸುಮಾರು 2 ಗಂಟೆಯ ವೇಳೆಗೆ ಋತಿಕಾ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ತ್ರಿಶೂರ್ ವೈದ್ಯಕೀಯ ಕಾಲೇಜಿನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಋತಿನ್‌ನ ಆರೋಗ್ಯ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ.

ಆರು ಮತ್ತು ಏಳು ವರ್ಷದ ಇಬ್ಬರು ಮಕ್ಕಳಿಗೆ ವಿಷ ಕುಡಿಸಿದ ಬಳಿಕ ಮುತ್ತು ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಭದ್ರತೆಗಾಗಿ ಇಬ್ಬರು ಪೊಲೀಸ್ ಸಿವಿಲ್ ಅಧಿಕಾರಿಗಳನ್ನು (ಸಿಪಿಒ) ನಿಯೋಜಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಪೊಲೀಸರ ಕಣ್ತಪ್ಪಿಸಿ ಮುತ್ತು ಆಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿ ಮುತ್ತುವನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. 

Post a Comment

0 Comments

ಜಾಹೀರಾತು

Responsive Advertisement