Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಸಕ್ರಿಯ ರಾಜಕೀಯಕ್ಕೆ ಗುಡ್‌ಬೈ ಹೇಳಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ; 2028ರ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧಾರ

ಬೆಂಗಳೂರು : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕ್ರಿಯ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ. 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಅವರು ಎಕ್ಸ್ (X) ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಸಂದೇಶದಲ್ಲಿ ತಿಳಿಸಿದ್ದಾರೆ.

ತಮಗೆ ಈಗ 79 ವರ್ಷ ವಯಸ್ಸಾಗಿದ್ದು, ಮುಂದಿನ ವಿಧಾನಸಭೆ ಚುನಾವಣೆ ನಡೆಯುವ ವೇಳೆಗೆ 82 ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ. ಆದರೆ, ಸಾರ್ವಜನಿಕ ಜೀವನದಿಂದ ದೂರವಾಗುವುದಿಲ್ಲ. ಜನರ ಸುಖ-ದುಃಖಗಳಲ್ಲಿ ಎಂದಿನಂತೆ ಜೊತೆಗಿದ್ದು ಸಾರ್ವಜನಿಕ ಸೇವೆಯನ್ನು ಮುಂದುವರಿಸುತ್ತೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

"ಹಿಂದೆ ಚುನಾವಣೆಯಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳಿಗೆ ಜನರು ಹಣ ಸಂಗ್ರಹಿಸಿ ನೀಡುತ್ತಿದ್ದರು. ಆದರೆ ಈಗ ಅಭ್ಯರ್ಥಿಗಳೇ ಮತದಾರರಿಗೆ ಹಣ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ರಾಜಕೀಯದಲ್ಲಿ ಭ್ರಷ್ಟಾಚಾರ ಹೆಚ್ಚಿದ್ದು, ಪ್ರಾಮಾಣಿಕ ರಾಜಕಾರಣಿಗಳು ಕಡಿಮೆಯಾಗುತ್ತಿದ್ದಾರೆ" ಎಂದು ಅವರು ಟೀಕಿಸಿದ್ದಾರೆ.

1978ರಲ್ಲಿ ತಾಲ್ಲೂಕು ಮಂಡಳಿ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದ ಸಿದ್ದರಾಮಯ್ಯ, ಐದು ದಶಕಗಳ ತಮ್ಮ ರಾಜಕೀಯ ಪಯಣದಲ್ಲಿ ಅನೇಕ ಗೆಲುವು-ಸೋಲುಗಳನ್ನು ಕಂಡಿದ್ದಾಗಿ ನೆನಪಿಸಿಕೊಂಡಿದ್ದಾರೆ. "ನಾನು ನಂಬಿದ ತತ್ವಗಳಿಗೆ ಎಂದಿಗೂ ದ್ರೋಹ ಮಾಡಿಲ್ಲ. ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಂಡಿಲ್ಲ ಎಂಬುದು ನನಗೆ ದೊಡ್ಡ ತೃಪ್ತಿ. ಕಳೆದ ಐದು ದಶಕಗಳಿಂದ ಕರ್ನಾಟಕದ ಜನರು ನನ್ನನ್ನು ತಮ್ಮವರಾಗಿ ಸ್ವೀಕರಿಸಿ ಪ್ರೀತಿ ತೋರಿದ್ದಾರೆ. ಆ ಋಣವನ್ನು ತೀರಿಸಲು ನನ್ನ ಮುಂದಿನ ಬದುಕನ್ನೂ ಸಾರ್ವಜನಿಕ ಸೇವೆಗೆ ಸಮರ್ಪಿಸುತ್ತೇನೆ" ಎಂದು ಸಿದ್ದರಾಮಯ್ಯ ಎಕ್ಸ್‌ನಲ್ಲಿ ತಮ್ಮ ಅಭಿಪ್ರಾಯ ಪ್ರಕಟಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement