Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಭೀಕರ ರಸ್ತೆ ಅಪಘಾತ : ಮದುವೆ ಮನೆಗೆ ತೆರಳುತ್ತಿದ್ದ ಐವರು ಸ್ನೇಹಿತರಲ್ಲಿ ನಾಲ್ವರು ದಾರುಣ ಮೃತ್ಯು, ಓರ್ವ ಗಂಭೀರ

ಕಣ್ಣೂರು : ಕೇರಳದ ಕಣ್ಣೂರು ಜಿಲ್ಲೆಯ ಕೂಡಾಳಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಂಬಂಧಿಕರ ಮದುವೆಯಲ್ಲಿ ಭಾಗವಹಿಸಲು ಬೆಂಗಳೂರಿನಿಂದ ಕಣ್ಣೂರಿಗೆ ಬರುತ್ತಿದ್ದ ಐವರು ಸ್ನೇಹಿತರ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಶನಿವಾರ ಮಧ್ಯರಾತ್ರಿ ನಡೆದ ಅಪಘಾತದಲ್ಲಿ ನಿಯಂತ್ರಣ ತಪ್ಪಿದ ಕಾರು ಭಾರೀ ವೇಗದಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ಮೃತರಲ್ಲಿ ಇಬ್ಬರು ಕೇರಳ ಮೂಲದವರಾಗಿದ್ದು, ಇನ್ನಿಬ್ಬರು ಉತ್ತರ ಪ್ರದೇಶದ ನಿವಾಸಿಗಳಾಗಿದ್ದಾರೆ. ಮೃತರನ್ನು ಪರಂ ಛೇದ್ರಿ, ಹರ್ಷ್, ರಿಜ್ವಾನ್ ಮತ್ತು ಶಾನ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡಿರುವ ಮತ್ತೋರ್ವರನ್ನು ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ.

ಮೃತ ಶಾನ್ ಅಲವಿಲ್ ಮೂಲದವರಾಗಿದ್ದು, ಸಂಬಂಧಿಕರ ವಿವಾಹ ಸಮಾರಂಭದಲ್ಲಿ ಭಾಗವಹಿಸಲು ತನ್ನ ಆಪ್ತ ಸ್ನೇಹಿತರೊಂದಿಗೆ ಶುಕ್ರವಾರ ಸಂಜೆ ಬೆಂಗಳೂರಿನಿಂದ ಕಾರಿನಲ್ಲಿ ಹೊರಟಿದ್ದರು. ಮನೆ ತಲುಪಲು ಇನ್ನೂ ಅರ್ಧ ಗಂಟೆ ಮಾತ್ರ ಬಾಕಿ ಇರುವಾಗ ಈ ದುರ್ಘಟನೆ ಸಂಭವಿಸಿದೆ.

ವಾಹನದಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಮೂವರನ್ನು ಆಸ್ಪತ್ರೆಗೆ ಸಾಗಿಸಿದ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು. ಗಾಯಗೊಂಡಿರುವ ಓರ್ವರಿಗೆ ಚಿಕಿತ್ಸೆ ಮುಂದುವರಿದಿದೆ.

ಅಪಘಾತದ ಸದ್ದು ಕೇಳಿ ಸ್ಥಳೀಯರು ಮೊದಲು ರಕ್ಷಣಾ ಕಾರ್ಯ ಆರಂಭಿಸಿದ್ದು, ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಕಾರನ್ನು ಕತ್ತರಿಸಿ ಒಳಗೆ ಸಿಲುಕಿದ್ದವರನ್ನು ಹೊರತೆಗೆದರು.

ಪ್ರಾಥಮಿಕ ತನಿಖೆಯಲ್ಲಿ ಕಾರು ಚಾಲನೆ ಮಾಡುತ್ತಿದ್ದ ವ್ಯಕ್ತಿ ನಿದ್ರೆಗೆ ಜಾರಿದ್ದರಿಂದ ಅಪಘಾತ ಸಂಭವಿಸಿರಬಹುದೇ ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರಿಸಿದ್ದಾರೆ.

ಇತ್ತ, ಮದುವೆ ಪೂರ್ವ ಕಾರ್ಯಕ್ರಮಗಳು ನಡೆಯುತ್ತಿದ್ದ ವೇಳೆ ಶಾನ್ ಅವರ ಕುಟುಂಬಕ್ಕೆ ಈ ದುಃಖದ ಸುದ್ದಿ ತಲುಪಿದೆ. ಬೆಂಗಳೂರಿನ ವಿವಿಧ ಖಾಸಗಿ ಕಂಪನಿಗಳಲ್ಲಿ ಉದ್ಯೋಗದಲ್ಲಿದ್ದ ಈ ಐವರು ಒಂದೇ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಆತ್ಮೀಯ ಸ್ನೇಹಿತರಾಗಿದ್ದು, ಮದುವೆಯಲ್ಲಿ ಭಾಗವಹಿಸಲು ಒಂದಾಗಿ ಊರಿಗೆ ತೆರಳುತ್ತಿದ್ದ ವೇಳೆ ವಿಧಿಯಾಟಕ್ಕೆ ಬಲಿಯಾಗಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement