Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಮಾರ್ಗದೀಪ ಸಾಂಸ್ಕೃತಿಕ ಸಮಿತಿಯಿಂದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ದುಬೈ : ಮಾರ್ಗದೀಪ ಸಾಂಸ್ಕೃತಿಕ ಸಮಿತಿ ದುಬೈ ವತಿಯಿಂದ ಸೆಪ್ಟೆಂಬರ್ ಇಪ್ಪತ್ತರಂದು ಅರ್ಮಾನ್ ಇಂಡಿಯನ್ ಅಸೋಸಿಯೇಷನ್ ನ ಸಭಾಂಗಣದಲ್ಲಿ ನಡೆಯಲಿರುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಪ್ರಚಾರ ಕಾರ್ಯದ ಮೂಹೂರ್ತ ಇತ್ತೀಚೆಗೆ ದುಬೈಯ ಪುಣೆ ರೆಸಿಡೆನ್ಸಿಯಲ್ಲಿ ನಡೆಯಿತು.

ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾರ್ಜಾ ಕರ್ನಾಟಕ ಸಂಘದ ಅಧ್ಯಕ್ಷರಾದ ವಿಶ್ವನಾಥ್ ಶೆಟ್ಟಿ, ಸಂಧ್ಯಾ ಕ್ರಿಯೇಷನ್ಸ್ ನ ಮುಖ್ಯಸ್ಥ ಶೋಧನ ಪ್ರಸಾದ್ ಹಾಗೂ ರಾಮಕ್ಷತ್ರಿಯ ಸಂಘ ಯುಎಇಯ ಉಪಾಧ್ಯಕ್ಷರಾದ ಲಕ್ಷ್ಮೀಶ ಚೇತನ್ ಉಪಸ್ಥಿತರಿದ್ದರು.

ನಂತರ ನಡೆದ ಸಭೆಯಲ್ಲಿ ಉತ್ಸವ ಸಮಿತಿಯ ಮುಖ್ಯ ಸಂಚಾಲಕರಾಗಿ ಸುಗಂಧರಾಜ ಬೇಕಲ್ ಹಾಗೂ ಅಜಿತ್ ಕೊರಕ್ಕೋಡು, ಸಾಂಸ್ಕೃತಿಕ ಕಾರ್ಯಕ್ರಮಗಳ ಮೇಲ್ವಿಚಾರಕರಾಗಿ ಸತೀಶ್ ಮಂಗಳೂರು, ಮಹಿಳಾ ವೃಂದದ ಮುಖ್ಯಸ್ಥೆಯಾಗಿ  ಸ್ಮಿತಾ ಗಣೇಶ್ ರಾವ್ ರವರನ್ನು ನೇಮಕ ಮಾಡಲಾಯಿತು.                        

ಮಾರ್ಗದೀಪ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷರಾದ ಮಹೇಶ್ ಚಂದ್ರಗಿರಿ, ಉಪಾಧ್ಯಕ್ಷರಾದ ಪ್ರವೀಣ್ ಉಪ್ಪೂರು, ಕಾರ್ಯದರ್ಶಿ ಸುನಿಲ್ ರಾವ್, ಕೋಶಾಧಿಕಾರಿ  ರಾಜೇಶ್ ರಾವ್ ಪುಣೆ, ಜೊತೆ ಕಾರ್ಯದರ್ಶಿ ಬಿಪಿನ್ ಚಂದ್ರ ನಾಯಕ್, ಕ್ರೀಡಾ ಕಾರ್ಯದರ್ಶಿ ಸುಬ್ರಹ್ಮಣ್ಯ ಕೆ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Post a Comment

0 Comments

ಜಾಹೀರಾತು

Responsive Advertisement