Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಬಸ್‌ನಲ್ಲಿ ಅಸಭ್ಯ ವರ್ತನೆ; ಖಾಸಗಿ ಬಸ್ ಕಂಡಕ್ಟರ್ ಬಂಧನ

ಮಂಗಳೂರು : ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕಂಡಕ್ಟರನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಪ್ಪಿನಂಗಡಿ ನಿವಾಸಿ ಇರ್ಫಾನ್ (32) ಎಂದು ಗುರುತಿಸಲಾಗಿದೆ. ಆತ ಮಂಗಳೂರು–ವಿಟ್ಲ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್‌ನಲ್ಲಿ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ.

ಪೊಲೀಸರ ಮಾಹಿತಿ ಪ್ರಕಾರ, ಜುಲೈ 9ರಂದು ಸಂಜೆ ಸುಮಾರು 5 ಗಂಟೆ ವೇಳೆಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಗುರಿಯಾಗಿಸಿಕೊಂಡು ಆರೋಪಿ ಅಸಭ್ಯ ವರ್ತನೆ ತೋರಿದ್ದಾನೆ. ತನ್ನ ಗುಪ್ತಾಂಗ ಪ್ರದರ್ಶಿಸಿ ಅಶ್ಲೀಲ ಸನ್ನೆ ಮಾಡಿದ್ದಲ್ಲದೆ, ಬಸ್‌ನ ಹಿಂದಿನ ಸೀಟಿನತ್ತ ಬರುವಂತೆ ಕೈಸನ್ನೆ ಮಾಡಿ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಿನ್ನೆ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.


Post a Comment

0 Comments

ಜಾಹೀರಾತು

Responsive Advertisement