ತಿರುವನಂತಪುರಂ: ಪ್ಲಸ್ ಟು ಸಪ್ಲಿಮೆಂಟರಿ ಪರೀಕ್ಷೆಯ ಫಲಿತಾಂಶವನ್ನು ಜುಲೈ 25 ಶನಿವಾರದಂದು ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವರ ಕಚೇರಿಯಿಂದ ತಿಳಿಸಲಾಗಿದೆ. ಪರೀಕ್ಷೆಗಳು ಜುಲೈ 3ರಂದು ಪೂರ್ಣಗೊಂಡಿದ್ದರೂ, ಫಲಿತಾಂಶ ಪ್ರಕಟಿಸುವ ದಿನಾಂಕವನ್ನು ಮೂರು ಬಾರಿ ಮುಂದೂಡಲಾಗಿತ್ತು. ಫಲಿತಾಂಶ ಪ್ರಕಟಣೆ ವಿಳಂಬವಾಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ಬಳಿಕ ಶಿಕ್ಷಣ ಸಚಿವರ ಕಚೇರಿಯಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ.
ಫಲಿತಾಂಶ ಪ್ರಕಟಣೆಯಲ್ಲಿ ಉಂಟಾದ ವಿಳಂಬದಿಂದ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಮುಂದುವರಿದಿರುವ ಈ ಸಂದರ್ಭದಲ್ಲಿ ಸುಮಾರು ಒಂದು ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆಯಲ್ಲಿತ್ತು. ಫಲಿತಾಂಶ ಪ್ರಕಟಣೆ ತಡವಾಗಲು ಜನಗಣತಿ (ಸೆನ್ಸಸ್) ಕರ್ತವ್ಯಕ್ಕೆ ಶಿಕ್ಷಕರನ್ನು ನಿಯೋಜಿಸಿದ್ದರಿಂದ ಮೌಲ್ಯಮಾಪನ ಕಾರ್ಯ ವಿಳಂಬವಾಗಿದ್ದು ಜೊತೆಗೆ ಸಾಫ್ಟ್‌ವೇರ್‌ನ ತಾಂತ್ರಿಕ ಸಮಸ್ಯೆಗಳೂ ಕಾರಣವಾಗಿವೆ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.
.png)
0 Comments