Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಮುಂಗಾರು ಅಧಿವೇಶನದ ಮೊದಲ ದಿನ 'ಚಲೋ ಸಂಸತ್' ಪ್ರತಿಭಟನೆಗೆ ಮುಂದಾದ ಸಿಜೆಪಿ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್‌

ನವದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ 'ಚಲೋ ಸಂಸತ್' ಪ್ರತಿಭಟನೆಗೆ ಮುಂದಾದ ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಲಾಠಿಚಾರ್ಜ್ ನಡೆಸಿದ್ದಾರೆ. ಘಟನೆಯ ಬಳಿಕ ದೆಹಲಿಯ ಕೆಲವು ಪ್ರದೇಶಗಳಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಜಂತರ್ ಮಂತರ್‌ನಿಂದ ಸಂಸತ್ ಭವನದವರೆಗೆ ಮೆರವಣಿಗೆ ನಡೆಸಲು ಸಿಜೆಪಿ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸಂಸತ್ ಕಡೆಗೆ ತೆರಳಲು ಯತ್ನಿಸಿದ ವೇಳೆ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ಅವರನ್ನು ಅವರನ್ನು ತಡೆದರು.

ಪ್ರತಿಭಟನಾಕಾರರು ಬ್ಯಾರಿಕೇಡ್ ದಾಟಿ ಮುಂದೆ ಸಾಗಲು ಪ್ರಯತ್ನಿಸಿದಾಗ ಪರಿಸ್ಥಿತಿ ಉದ್ವಿಗ್ನಗೊಂಡಿತು. ಬಳಿಕ ಪೊಲೀಸರು ಹಗುರ ಲಾಠಿಚಾರ್ಜ್ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದರು. ಈ ವೇಳೆ ಹಲವರನ್ನು ಬಂಧಿಸಲಾಗಿದೆ.

ಸಂಭವನೀಯ ಅಹಿತಕರ ಘಟನೆಗಳನ್ನು ತಡೆಯುವ ಉದ್ದೇಶದಿಂದ ದೆಹಲಿ ಪೊಲೀಸರು ಹಾಗೂ ರಾಪಿಡ್ ಆಕ್ಷನ್ ಫೋರ್ಸ್  ಜಂತರ್ ಮಂತರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಭದ್ರತೆ ನಿಯೋಜಿಸಿದ್ದರು. ಸಂಸತ್ತಿನ ಅಧಿವೇಶನದ ಹಿನ್ನೆಲೆ ನಗರದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿತ್ತು. ಮೆರವಣಿಗೆಗೆ ಅನುಮತಿ ನೀಡಲಾಗಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದು, ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement