Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಆಪರೇಷನ್ ತೂಫಾನ್ ವಿಶೇಷ ಕಾರ್ಯಾಚರಣೆಯ ವೇಳೆ ಎಂಡಿಎಂಎ ಮಾದಕ ವಸ್ತು ಸಾಗಿಸುತ್ತಿದ್ದ ಯುವಕನ ಬಂಧನ

ಕಾಸರಗೋಡು : ರಾಜ್ಯವ್ಯಾಪಿ ನಡೆಯುತ್ತಿರುವ 'ಆಪರೇಷನ್ ತೂಫಾನ್' ವಿಶೇಷ ಕಾರ್ಯಾಚರಣೆಯ ವೇಳೆ ಎಂಡಿಎಂಎ ಮಾದಕ ವಸ್ತು ಸಾಗಿಸುತ್ತಿದ್ದ ಯುವಕನನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಪನ್ನಿಪ್ಪಾರಾದ ಪೈಕ್ಕ ಕ್ವಾರ್ಟರ್ಸ್ ನಿವಾಸಿ ಕೆ.ಎ. ಮೊಹಮ್ಮದ್ ಅಫೀಫಿ (28) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಸುಮಾರು 2 ಗ್ರಾಂ ಎಂಡಿಎಂಎ ಹಾಗೂ ಸಾಗಾಟಕ್ಕೆ ಬಳಸಲಾಗಿದ್ದ ಸ್ಕೂಟರ್‌ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸೋಮವಾರ ಸಂಜೆ ಸುಮಾರು 5 ಗಂಟೆ ವೇಳೆಗೆ ಚೆಂಗಳ ಇಂದಿರಾನಗರ ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ, ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಸ್ಕೂಟರ್‌ನ್ನು ತಡೆದು ಪರಿಶೀಲಿಸಿದಾಗ ಮಾದಕ ವಸ್ತು ಪತ್ತೆಯಾಯಿತು.

ವಿದ್ಯಾನಗರ ಪೊಲೀಸ್ ಠಾಣೆಯ ಎಸ್‌ಐ ಅನೂಪ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದ್ದು, ಬಂಧಿತನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಮಾದಕ ವಸ್ತು ಪೂರೈಕೆ ಜಾಲದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದೆ.

Post a Comment

0 Comments

ಜಾಹೀರಾತು

Responsive Advertisement