Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಗೋವಾದ ಅತಿಥಿ ಗೃಹದಲ್ಲಿ ಮಲ್ಪೆ ಉದ್ಯಮಿ ಕೊಲೆ : ಮಹಿಳೆ ಬಂಧನ

 

ಮಂಗಳೂರು : ಗೋವಾದ ಕ್ಯಾಲಂಗುಟ್ ಬೀಚ್ ಸಮೀಪದ ಅತಿಥಿ ಗೃಹದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಉಡುಪಿ ಜಿಲ್ಲೆಯ ಮಲ್ಪೆ ನಿವಾಸಿ ಸಂದೀಪ್ ಸಾಲಿಯಾನ್ (40) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಕ್ಯಾಲಂಗುಟ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತೆಯನ್ನು ಅಕ್ಷತಾ ಎಂ.ಕೆ. ಎಂದು ಗುರುತಿಸಲಾಗಿದ್ದು, ಅವರು ಮೂಲತಃ ಮಂಗಳೂರಿನವರಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಬೆಂಗಳೂರಿನಲ್ಲಿ ಅವರನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.

ಜುಲೈ 1ರಂದು ಕ್ಯಾಲಂಗುಟ್ ನ  ಅತಿಥಿ ಗೃಹವೊಂದರಲ್ಲಿ ಸಂದೀಪ್ ಸಾಲಿಯಾನ್ ಅವರ ಮೃತದೇಹ ಪತ್ತೆಯಾಗಿತ್ತು. ಆರಂಭದಲ್ಲಿ ಸಾವಿನ ಕಾರಣ ಹೃದಯಾಘಾತವೇ ಅಥವಾ ಬೇರೆ ಕಾರಣವೇ ಎಂಬ ಅನುಮಾನ ವ್ಯಕ್ತವಾಗಿದ್ದರೂ, ಮರಣೋತ್ತರ ಪರೀಕ್ಷೆ ಹಾಗೂ ಪ್ರಾಥಮಿಕ ತನಿಖೆಯ ಬಳಿಕ ಇದು ಕೊಲೆ ಪ್ರಕರಣ ಎಂಬುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ತಾಂತ್ರಿಕ ಮಾಹಿತಿ ಹಾಗೂ ಇತರ ಸಾಕ್ಷ್ಯಗಳ ಆಧಾರದ ಮೇಲೆ ತನಿಖೆ ಮುಂದುವರಿಸಿದ ಪೊಲೀಸರು ಪ್ರಮುಖ ಆರೋಪಿ ಅಕ್ಷತಾ ಎಂ.ಕೆ. ಅವರ ಸುಳಿವು ಪತ್ತೆಹಚ್ಚಿ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಅವರನ್ನು ಟ್ರಾನ್ಸಿಟ್ ರಿಮಾಂಡ್ ಮೂಲಕ ಗೋವಾಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಸಂದೀಪ್ ಸಾಲಿಯಾನ್ ಈ ಹಿಂದೆ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಅವರ ಆಪ್ತ ಸಹಾಯಕರಾಗಿ ಕೆಲಸ ಮಾಡಿದ್ದರು. ನಂತರ ರಾಜಕೀಯದಿಂದ ದೂರ ಉಳಿದು ಪ್ರವಾಸೋದ್ಯಮ ಕ್ಷೇತ್ರಕ್ಕೆ ಕಾಲಿಟ್ಟು, ಮಲ್ಪೆಯಲ್ಲಿ ಪ್ರವಾಸಿ ದೋಣಿ (ಟೂರಿಸ್ಟ್ ಬೋಟ್) ನಡೆಸುತ್ತಿದ್ದರು.

ಪ್ರಕರಣದ ತನಿಖೆ  ಮುಂದುವರಿದಿದ್ದು, ಕೊಲೆಯ ಹಿಂದಿನ ಉದ್ದೇಶ ಸೇರಿದಂತೆ ಹಲವು ಆಯಾಮಗಳ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಇನ್ನಷ್ಟು ವಿವರಗಳು ತನಿಖೆಯ ಬಳಿಕ ಹೊರಬೀಳುವ ಸಾಧ್ಯತೆ ಇದೆ.

Post a Comment

0 Comments

ಜಾಹೀರಾತು

Responsive Advertisement