Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕಾಂಗ್ರೆಸ್ ಮುಖಂಡ, ಪ್ರಸಿದ್ಧ ಕಂಬಳ ಉದ್ಘೋಷಕ ನಿರಂಜನ್ ರೈ ಮಠಂತಬೆಟ್ಟು ಹೃದಯಾಘಾತದಿಂದ ನಿಧನ

ಪುತ್ತೂರು : ಪುತ್ತೂರಿನ ರಾಜಕೀಯ ಹಾಗೂ ಸಾಮಾಜಿಕ ವಲಯದ ಹಿರಿಯ ಮುಖಂಡ, ಪುತ್ತೂರು ಭೂ ನ್ಯಾಯ ಮಂಡಳಿಯ ಸದಸ್ಯ ಹಾಗೂ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿರಂಜನ ರೈ ಮಠಂತಬೆಟ್ಟು ಅವರು ಇಂದು (ಜು. 8) ಹೃದಯಾಘಾತದಿಂದ ನಿಧನರಾದರು.

ಕೆಲಸದ ನಿಮಿತ್ತ ತಾಲೂಕು ಕಚೇರಿಗೆ ಆಗಮಿಸಿದ್ದ ವೇಳೆ ನಿರಂಜನ ರೈ ಅವರು ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ನಿರಂಜನ ರೈ ಅವರು ಕೋಡಿಂಬಾಡಿ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೆ, ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕಂಬಳ ಕ್ರೀಡೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದರು. ಕಂಬಳ ಸ್ಪರ್ಧೆಗಳಲ್ಲಿ ವೀಕ್ಷಕ ವಿವರಣೆಗಾರರಾಗಿಯೂ ಅವರು ಜನಪ್ರಿಯರಾಗಿದ್ದರು.

ಕಾಂಗ್ರೆಸ್ ಪಕ್ಷದ ಸಕ್ರಿಯ ಮುಖಂಡರಾಗಿದ್ದ ಅವರು ರಾಜಕೀಯ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಜನಪರ ಸೇವೆಯ ಮೂಲಕ  ಗುರುತಿಸಿಕೊಂಡಿದ್ದರು. ಸರಳ ವ್ಯಕ್ತಿತ್ವ, ಸ್ನೇಹಪರ ನಡವಳಿಕೆ ಹಾಗೂ ಸಮಾಜಮುಖಿ ಕಾರ್ಯಗಳಿಂದ ಸಾರ್ವಜನಿಕರ ಅಪಾರ ಪ್ರೀತಿ-ಗೌರವವನ್ನು ಗಳಿಸಿದ್ದರು.

ನಿರಂಜನ ರೈ ಅವರ ನಿಧನಕ್ಕೆ ಕಂಬಳ ವಲಯದ ಗಣ್ಯರು, ವಿವಿಧ ಸಾಮಾಜಿಕ ಸಂಘಟನೆಗಳು, ರಾಜಕೀಯ ಮುಖಂಡರು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement