Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಅಂಗಡಿಮೊಗರು ಶಾಲಾ ಕಟ್ಟಡ ಉದ್ಘಾಟನಾ ಶಿಲಾಫಲಕದಿಂದ ಜಿ.ಪಂ.ಸದಸ್ಯನ ಹೆಸರು ಅಳಿಸಿದ ಪ್ರಕರಣ : ಕೃತ್ಯ ಉದ್ದೇಶಪೂರ್ವಕವೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ದೂರು

ಕಾಸರಗೋಡು : ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‌ನಡಿ ಜಿ.ಎಚ್.ಎಸ್.ಎಸ್. ಅಂಗಡಿಮುಗೇರು ಶಾಲೆಯಲ್ಲಿ ನಿರ್ಮಿಸಲಾದ ಹೊಸ ಕಟ್ಟಡದ ಉದ್ಘಾಟನಾ ಶಿಲಾಫಲಕದಿಂದ ಪುತ್ತಿಗೆ ಡಿವಿಶನ್ ನ ಜಿಲ್ಲಾ ಪಂಚಾಯತ್ ಸದಸ್ಯರ ಹೆಸರನ್ನು ಉದ್ದೇಶಪೂರ್ವಕವಾಗಿ ಅಳಿಸಲಾಗಿದೆ ಎಂದು ಆರೋಪಿಸಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ಜಿ.ಪಂ.ಸದಸ್ಯ ಸೋಮಶೇಖರ್ ಜೆ.ಎಸ್ ದೂರು ನೀಡಿದ್ದಾರೆ.

ಕಳೆದ ಮಾರ್ಚ್‌ನಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಶಿಕ್ಷಣ ಸಚಿವರು, ಶಾಸಕರು, ಇತರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಜಿಲ್ಲಾ ಪಂಚಾಯತ್ ಸದಸ್ಯರ ಹೆಸರೂ ಶಿಲಾಫಲಕದಲ್ಲಿ ದಾಖಲಿಸಲಾಗಿತ್ತು. ಆದರೆ, ಇದೀಗ ಅವರ ಹೆಸರನ್ನು ಮಾತ್ರ ಅಳಿಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಾರ್ವಜನಿಕ ಶಿಷ್ಟಾಚಾರ ಸೌಹಾರ್ದ ವಾತಾವರಣಕ್ಕೂ ಅಭಿವೃದ್ಧಿಗೂ ಧಕ್ಕೆಯುಂಟುಮಾಡುತ್ತವೆ ಎಂದು  ದೂರಿನಲ್ಲಿ ತಿಳಿಸಲಾಗಿದೆ.

ಶಾಲೆಯ ಅಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಇಂತಹ ಘಟನೆಗಳು ಶಾಲೆಯ ಸೌಹಾರ್ದ ವಾತಾವರಣಕ್ಕೂ ಅಭಿವೃದ್ಧಿಗೂ ಧಕ್ಕೆಯುಂಟುಮಾಡುತ್ತವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ತಕ್ಷಣ ಮಧ್ಯಪ್ರವೇಶಿಸಿ, ಉದ್ಘಾಟನಾ ಶಿಲಾಫಲಕದಲ್ಲಿ ಅಳಿಸಲಾದ ಕೃತ್ಯದ ಬಗ್ಗೆ  ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ತಿಳಿಸಲಾಗಿದೆ.


ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್


https://www.instagram.com/visheshachannel/

https://www.facebook.com/profile.php?id=61572771802334

https://x.com/VisheshaC4541

https://www.linkedin.com/in/visheshachannel/

www.youtube.com/@VisheshaChannelofficial




#news #viral #blogger #viralnews #dailypost

Post a Comment

0 Comments

ಜಾಹೀರಾತು

Responsive Advertisement