Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ವಿದ್ಯಾರ್ಥಿ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಕ್ಕಾಗಿ ಕೇರಳ ಪೊಲೀಸರು ದಾಖಲಿಸಿರುವ ಎಲ್ಲಾ ಪ್ರಕರಣಗಳನ್ನು ಹಿಂತೆಗೆಯಲು ವಿಪಕ್ಷ ನಾಯಕ ಪಿಣರಾಯಿ ವಿಜಯನ್ ಆಗ್ರಹ

ತಿರುವನಂತಪುರಂ: ದೆಹಲಿಯಲ್ಲಿ ನಡೆದ ಸಿಜೆಪಿ (CJP) ಪ್ರತಿಭಟನೆಗ ಬೆಂಬಲ ಸೂಚಿಸಿ ಕೇರಳದಲ್ಲಿ ಪ್ರತಿಭಟನೆ ನಡೆಸಿದವರ ವಿರುದ್ಧ ದಾಖಲಿಸಿರುವ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಪಕ್ಷ ನಾಯಕ ಪಿಣರಾಯಿ ವಿಜಯನ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಮುನ್ನಡೆಸಿದ್ದ ಪ್ರತಿಭಟನೆಗೆ ಬೆಂಬಲ ಸೂಚಿಸಿದವರ ವಿರುದ್ಧವೇ ಕೇರಳ ಸರ್ಕಾರ ಪ್ರಕರಣ ದಾಖಲಿಸಿರುವುದನ್ನು ಅವರು ಉಲ್ಲೇಖಿಸಿದ್ದಾರೆ.

ಇದೇ ಬೇಡಿಕೆಯನ್ನು ಮುಂದಿಟ್ಟು ಮುಖ್ಯಮಂತ್ರಿ ಅವರಿಗೂ ಪಿಣರಾಯಿ ವಿಜಯನ್ ಪತ್ರ ಬರೆದಿದ್ದಾರೆ. ಪ್ರತಿಭಟನೆಗೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದ್ದರೂ, ಕೇರಳದ ಯುಡಿಎಫ್ ಸರ್ಕಾರ ಇನ್ನೂ ಅದಕ್ಕೆ ಸಂಬಂಧಿಸಿದ ನಿರ್ಧಾರ ಕೈಗೊಂಡಿಲ್ಲ ಎಂದು ಅವರು ಟೀಕಿಸಿದ್ದಾರೆ.

ವಿದ್ಯಾರ್ಥಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರವೇ ಸಿದ್ಧವಾಗಿರುವ ಸಂದರ್ಭದಲ್ಲಿ, ಕೇಂದ್ರ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಗೆ ಐಕ್ಯತೆ ಸೂಚಿಸಿದವರ ವಿರುದ್ಧದ ಪ್ರಕರಣಗಳನ್ನು ಮುಂದುವರಿಸುವುದು ಸೂಕ್ತವಲ್ಲ. ವಿದ್ಯಾರ್ಥಿ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಕ್ಕಾಗಿ ಕೇರಳ ಪೊಲೀಸರು ದಾಖಲಿಸಿರುವ ಎಲ್ಲಾ ಪ್ರಕರಣಗಳನ್ನು ಯಾವುದೇ ಷರತ್ತುಗಳಿಲ್ಲದೆ ಹಿಂಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಆಗ್ರಹಿಸಿದ್ದಾರೆ.


https://www.instagram.com/visheshachannel/

https://www.facebook.com/profile.php?id=61572771802334

https://x.com/VisheshaC4541

https://www.linkedin.com/in/visheshachannel/

www.youtube.com/@VisheshaChannelofficial



#news #viral #blogger #viralnews #dailypost


Post a Comment

0 Comments

ಜಾಹೀರಾತು

Responsive Advertisement