Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಜೈಲಿನಲ್ಲಿ ವೀಡಿಯೊ ಕಾನ್ಫರೆನ್ಸ್ ಮೂಲಕ ಅಜ್ಜಿ ಚೆನ್ನಮ್ಮನ ಅಂತ್ಯಸಂಸ್ಕಾರ ವೀಕ್ಷಿಸಲಿರುವ ಪ್ರಜ್ವಲ್ ರೇವಣ್ಣ

 

ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರ  ಪಾರ್ಥಿವ ಶರೀರದ ಅಂತ್ಯಕ್ರಿಯೆ  ಇಂದು ಮಧ್ಯಾಹ್ನ 2 ಗಂಟೆ ನಂತರ ಹರದನಹಳ್ಳಿ ಬಳಿಯ ಬೆಟ್ಟದ ರಂಗನಾಥಸ್ವಾಮಿ ದೇವಾಲಯದ ತಪ್ಪಲಿನಲ್ಲಿ ನಡೆಯಲಿದ್ದು ಕುಟುಂಬದವರೆಲ್ಲ ಭಾಗಿಗಳಾಗುತ್ತಿದ್ದರೂ , ಜೈಲಿನಲ್ಲಿರುವ ಮೊಮ್ಮಗ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಾಗುತ್ತಿಲ್ಲ.ಇದಕ್ಕೆ ಅಗತ್ಯ  ಪೆರೋಲ್ ಗೆ ಕೋರಿ ಯಾವುದೇ ಅರ್ಜಿ ಸಲ್ಲಿಸದ ಕಾರಣ ಪರಪ್ಪನ ಅಗ್ರಹಾರ ಜೈಲಿನಲ್ಲೇ ವೀಡಿಯೊ ಕಾನ್ಫರೆನ್ಸ್ ಮೂಲಕ ಅಂತ್ಯಸಂಸ್ಕಾರದ ವಿಧಿ ವಿಧಾನಗಳನ್ನು ವೀಕ್ಷಿಸಲಿದ್ದಾರೆ..

ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಒಳಗಿರುವುದರಿಂದ, ಈ ಸಂದರ್ಭದಲ್ಲಿ ಹೊರಬಂದರೆ ಕುಟುಂಬಕ್ಕೆ ಹಾಗೂ ಸಾರ್ವಜನಿಕವಾಗಿ ಇರಿಸುಮುರಿಸು ಉಂಟಾಗಬಹುದು. ಆದ್ದರಿಂದ ಯಾವುದೇ ಕಾರಣಕ್ಕೂ ಪೆರೋಲ್‌ಗೆ ಅರ್ಜಿ ಸಲ್ಲಿಸದಂತೆ ತಂದೆ ಹೆಚ್.ಡಿ. ರೇವಣ್ಣ ನೀಡಿದ ಸಲಹೆಯಂತೆ ಪ್ರಜ್ವಲ್ ಅರ್ಜಿ ಹಾಕಿಲ್ಲ ಎಂದು ತಿಳಿದುಬಂದಿದೆ.

ಸಾಮಾನ್ಯವಾಗಿ ಸಜಾ ಕೈದಿಗೆ ಪೆರೋಲ್ ಸಿಗಬೇಕಾದರೆ ಕನಿಷ್ಠ ಎರಡು ವರ್ಷಗಳ ಕಾಲ ಶಿಕ್ಷೆ ಅನುಭವಿಸಿರಬೇಕಾಗುತ್ತದೆ. ಜೊತೆಗೆ ಅತ್ಯಾಚಾರದಂತಹ ಗಂಭೀರ ಪ್ರಕರಣಗಳಲ್ಲಿ ಕೋರ್ಟ್ ಹಾಗೂ ಜೈಲು ಆಡಳಿತ ಮಂಡಳಿಯಿಂದ ಪೆರೋಲ್ ಅಥವಾ ತುರ್ತು ಜಮೀನು ಸಿಗುವುದು ಅತ್ಯಂತ ವಿರಳ.

ಅಂತ್ಯಕ್ರಿಯೆಯ ಸ್ಥಳಕ್ಕೆ ತೆರಳಲು ಅವಕಾಶವಿಲ್ಲದ ಕಾರಣ, ಮಾನವೀಯತೆಯ ಆಧಾರದ ಮೇಲೆ ತಮ್ಮ ಸೆಲ್‌ನಲ್ಲಿರುವ ಟಿವಿ ಅಥವಾ ಜೈಲು ಆಡಳಿತ ಒದಗಿಸುವ ವೀಡಿಯೊ ಕಾನ್ಫರೆನ್ಸ್  ವ್ಯವಸ್ಥೆಯ ಮೂಲಕ ಅಂತ್ಯಕ್ರಿಯೆಯ ನೇರ ಪ್ರಸಾರವನ್ನು ವೀಕ್ಷಿಸಲಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement