ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪಿಯಾದ ಉಪ್ಪಿನಂಗಡಿ ನಿವಾಸಿ ರಿಕ್ಷಾ ಚಾಲಕನಾದ ಶುಭರಾಜ್ (28) ಎಂಬಾತನನ್ನು ಬೆಳ್ತಂಗಡಿ ಪೋಲಿಸರು ಬಂಧಿಸಿದ್ದಾರೆ.
ಇತ್ತೀಚೆಗೆ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ಮಾಡಿಸಿದಾಗ ಆಕೆ ಗರ್ಭಿಣಿಯಾಗಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ತಾಯಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.
ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ತೀವ್ರ ವಿಚಾರಣೆ ನಡೆಸಿದ ಬಳಿಕ ಮಂಗಳೂರಿನ ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲು ಆದೇಶಿಸಿದೆ.

0 Comments