Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಡಾ. ವಸಂತಕುಮಾರ ಪೆರ್ಲ ಅವರ ಅನುವಾದಿತ ತುಳು ಕಾದಂಬರಿ 'ಯಾತ್ರೆ' ಬಿಡುಗಡೆ

ಮೂಡಬಿದಿರೆ: ಆಳ್ವಾಸ್ ನುಡಿಸಿರಿಯ ಸಿದ್ಧತಾ ಸಭೆಯ ಅಂಗವಾಗಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಡಾ. ವಸಂತಕುಮಾರ ಪೆರ್ಲ ಅವರ 'ಸಂಕೇತಿ' ಹಾಗೂ ಕನ್ನಡ ಭಾಷೆಯಿಂದ ತುಳುವಿಗೆ ಅನುವಾದಿಸಿದ ಪ್ರಣತಾರ್ತಿ ಹರನ್ ಅವರ 'ಯಾತ್ರೆ' ಕಾದಂಬರಿಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಬಿಡುಗಡೆಗೊಳಿಸಿ, ಅನುವಾದ ಕಾರ್ಯಗಳು ತುಳು ಸಾಹಿತ್ಯಕ್ಷೇತ್ರವನ್ನು ಸಮೃದ್ಧಗೊಳಿಸಲಿ ಎಂದು ಹೇಳಿದರು. ಅನುವಾದಕರಾದ ಡಾ. ವಸಂತಕುಮಾರ ಪೆರ್ಲ ಅವರು ಕೃತಿಯ ಕುರಿತು ಮಾತಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಎಂ.ಪಿ. ಶ್ರೀನಾಥ್, ವಿದ್ವಾಂಸ ಡಾ. ಪಾದೆಕಲ್ಲು ವಿಷ್ಣು ಭಟ್, ಬಂಟ್ವಾಳದ ರಾಣಿ ಅಬ್ಬಕ್ಕ ಕೇಂದ್ರದ ಡಾ. ತುಕಾರಾಮ ಪೂಜಾರಿ, ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಡಾ. ಧನಂಜಯ ಕುಂಬ್ಳೆ, ವಿಮರ್ಶಕ ಸತ್ಯನಾರಾಯಣ ಮಲ್ಲಿಪಟ್ಟಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಉಪನ್ಯಾಸಕ ಯೋಗೀಶ್ ಕೈರೋಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.


ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್


https://www.instagram.com/visheshachannel/

https://www.facebook.com/profile.php?id=61572771802334

https://x.com/VisheshaC4541

https://www.linkedin.com/in/visheshachannel/

www.youtube.com/@VisheshaChannelofficial




#news #viral #blogger #viralnews #dailypost

Post a Comment

0 Comments

ಜಾಹೀರಾತು

Responsive Advertisement