Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರಗೈದು ನಗ್ನ ಚಿತ್ರಗಳ ವೈರಲ್ ಬೆದರಿಕೆ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿ, ನಗ್ನ ಚಿತ್ರಗಳನ್ನು ವೈರಲ್ ಮಾಡುವುದಾಗಿ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಯಾದ ಸೋನು ಮ್ಯಾಕ್ಲಿನ್ ನೊರೊನ್ಹಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

ಆರೋಪಿ 2024ರ ಫೆಬ್ರವರಿಯಿಂದ ಪ್ರೀತಿಯ ನೆಪದಲ್ಲಿ ಅಪ್ರಾಪ್ತೆಯನ್ನು ಪರಿಚಯಿಸಿಕೊಂಡು, 2024ರ ಸೆಪ್ಟೆಂಬರ್‌ನಿಂದ 2025ರ ಜೂನ್‌ವರೆಗೆ ಮಂಗಳೂರಿನ ವಿವಿಧೆಡೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಬಾಲಕಿ ಸ್ನಾನ ಮಾಡುತ್ತಿದ್ದ ವೇಳೆ ವೀಡಿಯೊ ಕರೆ ಮೂಲಕ ನಗ್ನ ದೃಶ್ಯಗಳ ಸ್ಕ್ರೀನ್‌ಶಾಟ್‌ಗಳನ್ನು ಸಂಗ್ರಹಿಸಿ, ದೈಹಿಕ ಸಂಪರ್ಕಕ್ಕೆ ನಿರಾಕರಿಸಿದರೆ ಅವುಗಳನ್ನು ವೈರಲ್ ಮಾಡುವುದಾಗಿ ಹಾಗೂ ಬಾಲಕಿ, ಆಕೆಯ ತಾಯಿ ಮತ್ತು ಅಕ್ಕನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಪ್ರಕರಣದ ತನಿಖೆಯನ್ನು ಅಂದಿನ ಕಂಕನಾಡಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾಗಿದ್ದ ಟಿ.ಡಿ. ನಾಗರಾಜ್ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾ ದೇವಿ ವಾದ ಮಂಡಿಸಿದ್ದರು. ನ್ಯಾಯಾಲಯವು ಪೋಕ್ಸೋ ಕಾಯ್ದೆಯಡಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿದ್ದು, ಇತರೆ ಸಂಬಂಧಿತ ಕಲಂಗಳಡಿ ತಲಾ ಒಂದು ವರ್ಷದ ಜೈಲು ಶಿಕ್ಷೆ ಮತ್ತು ತಲಾ ರೂ.5 ಸಾವಿರ ದಂಡವನ್ನೂ ವಿಧಿಸಿದೆ.


ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್


https://www.instagram.com/visheshachannel/

https://www.facebook.com/profile.php?id=61572771802334

https://x.com/VisheshaC4541

https://www.linkedin.com/in/visheshachannel/

www.youtube.com/@VisheshaChannelofficial



#news #viral #blogger #viralnews #dailypost

Post a Comment

0 Comments

ಜಾಹೀರಾತು

Responsive Advertisement