Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : 8 ಮಂದಿ ಸಹಪಾಠಿಗಳು ಶಾಮೀಲು

ಪತ್ತನಂತಿಟ್ಟ : ಕೇರಳದ ಪತ್ತನಂತಿಟ್ಟದಲ್ಲಿ 13 ವರ್ಷದ ವಿದ್ಯಾರ್ಥಿನಿಯ ಮೇಲೆ  ಸಹಪಾಠಿಗಳೇ ಸೇರಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಅಪ್ರಾಪ್ತರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಪೈಕಿ ಒಬ್ಬ ಬಾಲಕಿ ಸೇರಿದಂತೆ ಐವರನ್ನು ಪೊಲೀಸರು ಗುರುತಿಸಿ ಪ್ರಕರಣ ದಾಖಲಿಸಿದ್ದಾರೆ.

ಶಾಲೆಯಲ್ಲಿ ನಡೆದ ಕೌನ್ಸೆಲಿಂಗ್ ವೇಳೆ ವಿದ್ಯಾರ್ಥಿನಿ ತನ್ನ ಮೇಲೆ ನಡೆದ ದೌರ್ಜನ್ಯದ ಕುರಿತು ಬಹಿರಂಗಪಡಿಸಿದ್ದಾಳೆ. ಆಕೆಯ ಹೇಳಿಕೆಯ ಪ್ರಕಾರ, ಮೊದಲಿಗೆ ಶಾಲೆಯ ಸಮೀಪದಲ್ಲಿ ಹಾಗೂ ಬಳಿಕ ಆರೋಪಿಗಳಲ್ಲಿ ಒಬ್ಬಳಾದ ಬಾಲಕಿಯ ಮನೆಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ.

ಪ್ರಾಥಮಿಕ ತನಿಖೆಯ ಆಧಾರದ ಮೇಲೆ ನಾಲ್ವರು ಸಹಪಾಠಿ ಬಾಲಕರು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಬಾಲಕಿ ಆರೋಪಿಗಳಿಗೆ ಸಹಕಾರ ನೀಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ಇದೇ ವೇಳೆ, ಶಾಲೆಯ ಹೊರಗಿನ ಕೆಲವರೂ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ವಿದ್ಯಾರ್ಥಿನಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾಳೆ. ಅವರನ್ನು ಕಂಡರೆ ಗುರುತು ಪತ್ತೆ ಹಚ್ಚಬಹುದಾದ ಹಿನ್ನೆಲೆಯಲ್ಲಿ, ಹೊರಗಿನ ಆರೋಪಿಗಳ ಗುರುತಿಸಲು ಪೊಲೀಸರು ವಿಶೇಷ ತನಿಖೆ ಆರಂಭಿಸಿದ್ದಾರೆ.

ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಉಳಿದ ಆರೋಪಿಗಳನ್ನು ಗುರುತಿಸುವ ಕಾರ್ಯ ಮುಂದುವರಿದಿದೆ.

Post a Comment

0 Comments

ಜಾಹೀರಾತು

Responsive Advertisement