ಕಾಸರಗೋಡು : ನಗರದ ಬಿ ಇ ಎಂ ಶಾಲೆಯಲ್ಲಿ 2025-26 ನೇ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 10 ಹಾಗೂ 9 ವಿಷಯಗಳಲ್ಲಿ ಎ ಪ್ಲಸ್ ಪಡೆದ ವಿದ್ಯಾರ್ಥಿಗಳನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ವತಿಯಿಂದ ಅಭಿನಂದಿಸುವ ಕಾರ್ಯಕ್ರಮ ನಡೆಯಿತು.
ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಹರೀಶ್ ಕೆ ಆರ್ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಉಪ ಶಿಕ್ಷಣಾಧಿಕಾರಿ ಶಶಿಧರ್ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ " ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಕ್ಷಣಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು, ಪ್ರತಿಭಾವಂತ ವಿದ್ಯಾರ್ಥಿಗಳು ಇಂದಿನ ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ" ಎಂದು ವಿದ್ಯಾರ್ಥಿಗಳಿಗೆ ಪ್ರೇರಣೆಯನ್ನು ನೀಡುವಂತಹ ಹಿತನುಡಿಗಳನ್ನು ಆಡಿದರು. ಬಿ ಎಸ್ ಕಕ್ಕಿಲ್ಲಾಯ ಮತ್ತು ಅವರ ಪತ್ನಿ ಸರೋಜಿನಿ ಅವರ ಸ್ಮರಣಾರ್ಥ ಕನ್ನಡ ವಿದ್ಯಾರ್ಥಿಗಳಾದ ಕುಮಾರಿ ಮೇಧಾ ಭಟ್ ಹಾಗೂ ಶ್ರೀರಕ್ಷ ಅವರಿಗೆ ನಗದು ಬಹುಮಾನವನ್ನು ನೀಡಿ ಪುರಸ್ಕರಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಕಿಶೋರ್ ಕುಮಾರ್, ಶಾಲಾ ಎಸ್ ಎಂ ಸಿ ಚೆಯರ್ ಮೆನ್ ಡಾ. ಕೆ.ಎನ್.ವೆಂಕಟರಮಣ ಹೊಳ್ಳ, ವಾರ್ಡ್ ಕೌನ್ಸಿಲರ್ ರಾಮಕೃಷ್ಣ ಹೊಳ್ಳ ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು. ಅಭಿನಂದನೆಗೆ ಅರ್ಹರಾದ ವಿದ್ಯಾರ್ಥಿಗಳಿಗೆ ಅತಿಥಿಗಳು ಸ್ಮರಣಿಕೆ ನೀಡಿದರು. ಶಾಲಾ ಮುಖ್ಯೋಪಾಧ್ಯಾಯ ಗಣೇಶ್ ಸ್ವಾಗತಿಸಿ, ಬಾಲಕೃಷ್ಣ .ಪಿ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಡಿದರು. ಯಶವಂತ ವೈ ನಿರೂಪಿಸಿದರು.
ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್
https://www.instagram.com/visheshachannel/
https://www.facebook.com/profile.php?id=61572771802334
https://www.linkedin.com/in/visheshachannel/
www.youtube.com/@VisheshaChannelofficial
#news #viral #blogger #viralnews #dailypost

0 Comments