Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕಾದ ಶಿಕ್ಷಕಿಯರು ಮಾದಕ ಜಾಲ ಬಲೆಯಲ್ಲಿ : ಇಬ್ಬರ ಬಂಧನ

ಕೋಝಿಕ್ಕೋಡು : ಎಂಡಿಎಂಎ ಮಾದಕ ವಸ್ತು ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಇಬ್ಬರು ಶಿಕ್ಷಕಿಯರನ್ನು ವಡಕರ ಪೊಲೀಸರು ಬಂಧಿಸಿದ್ದಾರೆ. ಪೇರಾಂಬ್ರ ಬಿಆರ್‌ಸಿ (BRC)ಯ ವಿಶೇಷ ಶಿಕ್ಷಕಿಯಾಗಿರುವ ಕೂರಾಚುಂಡು ಕಾಪ್ಪುಮುಕ್ಕಿನ ಕಾವ್ಯ ಹಾಗೂ ತಾತ್ಕಾಲಿಕ ದೈಹಿಕ  ಶಿಕ್ಷಕಿಯಾಗಿರುವ ಮರುತೋಂಕರದ ಕೆ.ಸಿ. ಕೀರ್ತನಾ ಬಂಧಿತ ಆರೋಪಿಗಳಾಗಿದ್ದಾರೆ.

ಪೊಲೀಸರ ತನಿಖೆಯಲ್ಲಿ ಕಾವ್ಯ ಅವರ ಬ್ಯಾಂಕ್ ಖಾತೆಯ ಮೂಲಕ ಎಂಡಿಎಂಎ ಮಾರಾಟಕ್ಕೆ ಸಂಬಂಧಿಸಿದಂತೆ ಲಕ್ಷಾಂತರ ರೂಪಾಯಿಗಳ ಹಣಕಾಸು ವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ಇದರ ಆಧಾರದ ಮೇಲೆ ಇಬ್ಬರ ಬಂಧನವನ್ನು ಅಧಿಕೃತವಾಗಿ ದಾಖಲಿಸಲಾಗಿದೆ.

ಮೊದಲು ತಾತ್ಕಾಲಿಕ ದೈಹಿಕ ಶಿಕ್ಷಣ ಶಿಕ್ಷಕಿ ಕೀರ್ತನಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆಕೆಯಿಂದ ದೊರೆತ ಮಾಹಿತಿಯ ಆಧಾರದ ಮೇಲೆ ವಿಶೇಷ ಶಿಕ್ಷಕಿ ಕಾವ್ಯಳನ್ನು ಬಂಧಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಇಬ್ಬರೂ ಸೇರಿದ್ದ ತಂಡವು ಜಿಲ್ಲೆಯ ಎಂಡಿಎಂಎ ವಿತರಣಾ ಜಾಲವನ್ನು ನಿಯಂತ್ರಿಸುತ್ತಿತ್ತು. ಮಾದಕ ವಸ್ತು ಖರೀದಿಸಲು ಬರುವವರು ಮೊದಲು ಇವರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುತ್ತಿದ್ದರು. ಬಳಿಕ ಆ ಮಾಹಿತಿಯ ಆಧಾರದ ಮೇಲೆ ತಂಡದ ಇತರ ಸದಸ್ಯರು ಎಂಡಿಎಂಎಯನ್ನು ಗ್ರಾಹಕರಿಗೆ ತಲುಪಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರಿಂದ ಲಭಿಸಿದ ಮಾಹಿತಿಯ ಆಧಾರದ ಮೇಲೆ ಇನ್ನೂ ಹಲವು ಬ್ಯಾಂಕ್ ಖಾತೆಗಳ ವ್ಯವಹಾರಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಪ್ರಕರಣದಲ್ಲಿ ಇನ್ನಷ್ಟು ಮಹತ್ವದ ಸುಳಿವುಗಳು ಲಭಿಸುವ ಸಾಧ್ಯತೆ ಇದೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ.


ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್


https://www.instagram.com/visheshachannel/

https://www.facebook.com/profile.php?id=61572771802334

https://x.com/VisheshaC4541

https://www.linkedin.com/in/visheshachannel/

www.youtube.com/@VisheshaChannelofficial




#news #viral #blogger #viralnews #dailypost

Post a Comment

0 Comments

ಜಾಹೀರಾತು

Responsive Advertisement