Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಅಮರನಾಥ ಯಾತ್ರೆ ಭದ್ರತೆಗೆ ನಿಯೋಜಿತ ಪೊಲೀಸ್ ರ ಮೇಲೆ ಉಗ್ರರ ದಾಳಿ : . ಓರ್ವ ಹುತಾತ್ಮ

 

ಶ್ರೀನಗರ : ಪಹಲ್ಗಾಮ್ ದಾಳಿಯ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದರೂ, ಉಗ್ರರು ಮತ್ತೆ ದಾಳಿ ನಡೆಸಿದ್ದಾರೆ. ಬುಧವಾರ ಅನಂತನಾಗ್‌ನ ಲಾಲ್ ಚೌಕ್ ಪ್ರದೇಶದಲ್ಲಿ ಪೊಲೀಸರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಅಮರನಾಥ ಯಾತ್ರೆಯ ಭದ್ರತಾ ಕರ್ತವ್ಯದಲ್ಲಿದ್ದ ಹೆಡ್ ಕಾನ್‌ಸ್ಟೇಬಲ್ ಆಶಿಕ್ ಹುಸೇನ್ ಕುರೇಷಿ (35) ಹುತಾತ್ಮರಾಗಿದ್ದಾರೆ.

ಇಂದು ಮಧ್ಯಾಹ್ನ ಸುಮಾರು 12.30ಕ್ಕೆ ನಡೆದ ಈ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡ ಆಶಿಕ್ ಹುಸೇನ್ ಅವರನ್ನು ತಕ್ಷಣವೇ ಅನಂತನಾಗ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಪಹಲ್ಗಾಮ್ ಉಗ್ರ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದ್ದು, ಅಮರನಾಥ ಯಾತ್ರೆಯ ಹಿನ್ನೆಲೆಯಲ್ಲಿ ಹೆಚ್ಚುವರಿ ಭದ್ರತೆಯನ್ನು ನಿಯೋಜಿಸಲಾಗಿತ್ತು. ಇಂತಹ ಪರಿಸ್ಥಿತಿಯಲ್ಲೇ ಯಾತ್ರೆಯ ಭದ್ರತಾ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿರುವುದು ಆತಂಕಕ್ಕೆ ಕಾರಣವಾಗಿದೆ.

ಘಟನೆಯ ಬಳಿಕ ಭದ್ರತಾ ಪಡೆಗಳು ಲಾಲ್ ಚೌಕ್ ಸೇರಿದಂತೆ ಅನಂತನಾಗ್‌ನ ಸುತ್ತಮುತ್ತಲಿನ ಪ್ರದೇಶವನ್ನು ಸುತ್ತುವರಿದು, ದಾಳಿ ನಡೆಸಿ ಪರಾರಿಯಾಗಿರುವ ಉಗ್ರರ ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿವೆ. ಅಮರನಾಥ ಯಾತ್ರೆಯ ಭದ್ರತೆಯನ್ನೂ ಮತ್ತಷ್ಟು ಬಿಗಿಗೊಳಿಸಲಾಗಿದೆ.

Post a Comment

0 Comments

ಜಾಹೀರಾತು

Responsive Advertisement