Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಮಹಾಮಳೆಗೆ ಮುಂಬೈಯ ಗ್ಯಾಸ್ ಫಿಲ್ಲಿಂಗ್ ಘಟಕದಿಂದ ತೇಲಿ ಹೋದ ಮೂರು ಸಾವಿರ ಸಿಲಿಂಡರ್‌ಗಳು

ಮುಂಬೈ : ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ರಾಯಗಢ ಜಿಲ್ಲೆಯ ಪಾತಾಳಗಂಗಾ ನದಿಯಲ್ಲಿ ಸುಮಾರು 3,000 LPG ಸಿಲಿಂಡರ್‌ಗಳು ಕೊಚ್ಚಿ ಹೋಗಿರುವ ಘಟನೆ ಆತಂಕ ಸೃಷ್ಟಿಸಿದೆ. ಪನ್ವೇಲ್ ತಾಲೂಕಿನ ಚವಾಣೆ ಗ್ರಾಮದ HPCL ಪಾತಾಳಗಂಗಾ LPG ಬಾಟ್ಲಿಂಗ್ ಘಟಕಕ್ಕೆ ಪ್ರವಾಹದ ನೀರು ನುಗ್ಗಿದ ಪರಿಣಾಮ ಈ ಘಟನೆ ಸಂಭವಿಸಿದೆ.

ಕೊಚ್ಚಿ ಹೋದ ಸಿಲಿಂಡರ್‌ಗಳಲ್ಲಿ ಕೆಲವು ಗ್ಯಾಸ್‌ ತುಂಬಿದ್ದರೆ, ಇನ್ನೂ ಕೆಲವು ಖಾಲಿಯಾಗಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನದಿಯಲ್ಲಿ ಸಿಲಿಂಡರ್‌ಗಳು ತೇಲುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ಘಟನೆಯ ಬಳಿಕ ಜಿಲ್ಲಾಡಳಿತ ಮತ್ತು ಪೊಲೀಸರು ಸ್ಥಳದಲ್ಲಿ ಭದ್ರತೆ ಹೆಚ್ಚಿಸಿದ್ದು, ನದಿ ತೀರದ ಜನರಿಗೆ ವಿಶೇಷ ಎಚ್ಚರಿಕೆ ನೀಡಲಾಗಿದೆ. ನದಿಯಲ್ಲಿ ತೇಲುತ್ತಿರುವ ಅಥವಾ ದಡಕ್ಕೆ ಬಂದು ಸೇರಿದ ಯಾವುದೇ ಸಿಲಿಂಡರ್‌ನ ಸಮೀಪಕ್ಕೂ ಹೋಗಬಾರದು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದ್ದು, ಸಾರ್ವಜನಿಕರು ಅನಗತ್ಯವಾಗಿ ನದಿ ತೀರಕ್ಕೆ ತೆರಳದಂತೆ ಹಾಗೂ ಅಧಿಕಾರಿಗಳ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Post a Comment

0 Comments

ಜಾಹೀರಾತು

Responsive Advertisement