ಕಾಸರಗೋಡು : ಚೆರವತ್ತೂರಿನ ಕೊತ್ತಂಗರದಲ್ಲಿ ಮನೆಯ ಸುತ್ತುಗೋಡೆ ನಿರ್ಮಾಣ ಕಾಮಗಾರಿ ವೇಳೆ ಗೋಡೆ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಸುಮಾರು 1 ಗಂಟೆಯ ವೇಳೆಗೆ ಈ ಅವಘಡ ಸಂಭವಿಸಿದೆ. ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದ ಮಣ್ಣು ಸಂಪೂರ್ಣ ತೇವಗೊಂಡಿದ್ದ ಹಿನ್ನೆಲೆಯಲ್ಲಿ ಸುತ್ತುಗೋಡೆ ಕುಸಿದಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿಸಿದೆ.
ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರ ಸಹಕಾರದೊಂದಿಗೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಮಣ್ಣಿನಡಿ ಸಿಲುಕಿರುವ ಮೂವರಲ್ಲಿ ಇಬ್ಬರು ಸೊಂಟದವರೆಗೆ ಮಣ್ಣಿನಲ್ಲಿ ಸಿಲುಕಿರುವುದಾಗಿ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಅವರನ್ನು ಸುರಕ್ಷಿತವಾಗಿ ಹೊರತೆಗೆಯಲು ತೀವ್ರ ಪ್ರಯತ್ನ ನಡೆಯುತ್ತಿದೆ. ಇನ್ನೋರ್ವನಿಗಾಗಿ ಶೋಧ ಕಾರ್ಯ ಪ್ರಗತಿಯಲ್ಲಿದೆ.
ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್
https://www.instagram.com/visheshachannel/
https://www.facebook.com/profile.php?id=61572771802334
https://www.linkedin.com/in/visheshachannel/
www.youtube.com/@VisheshaChannelofficial
#news #viral #blogger #viralnews #dailypost

0 Comments