Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ನೀಟ್‌ ವಿವಾದದ ಕಾವು : ಯುವ ಸಮೂಹಕ್ಕೆ ಐತಿಹಾಸಿಕ ಗೆಲುವು : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ



ನವದೆಹಲಿ : ದೇಶವ್ಯಾಪಿ ಭಾರಿ ಸಂಚಲನ ಮೂಡಿಸಿರುವ ನೀಟ್‌ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆಂದು ಅಧಿಕೃತ ಮೂಲಗಳು ತಿಳಿಸಿವೆ.  

ದೆಹಲಿಯ ಜಂತರ್ ಮಂತರ್‌ನಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ನೇತೃತ್ವದಲ್ಲಿ ವಿದ್ಯಾರ್ಥಿಗಳು ಕಳೆದ ಕೆಲವು ದಿನಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದರು. ಸಚಿವರ ವಜಾ ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ವಿದ್ಯಾರ್ಥಿ ಸಂಘಟನೆಗಳು ಬಿಗಿಪಟ್ಟು ಹಿಡಿದಿದ್ದವು. ಈ ಬಿಕ್ಕಟ್ಟಿನ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಮತ್ತು ಸಿಜೆಪಿ (CJP) ಪ್ರತಿನಿಧಿಗಳ ನಡುವೆ ಇಂದು (ಶನಿವಾರ) ಮಧ್ಯಾಹ್ನ 3 ಗಂಟೆಗೆ 3ನೇ ಸುತ್ತಿನ ಮಹತ್ವದ ಮಾತುಕತೆ ನಿಗದಿಯಾಗಿತ್ತು. ಆದರೆ, ಸಭೆ ಆರಂಭಕ್ಕೂ ಮುನ್ನವೇ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಹುದ್ದೆಯಿಂದ ಕೆಳಕ್ಕಿಳಿದಿರುವುದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಇದು ದೇಶದ ಯುವ ಸಮೂಹ ಹಾಗೂ ವಿದ್ಯಾರ್ಥಿ ಹೋರಾಟಕ್ಕೆ ಸಿಕ್ಕ ಅತಿದೊಡ್ಡ ಜಯವೆಂದು ವಿಶ್ಲೇಷಿಸಲಾಗಿದೆ. 
 
 ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ನೈತಿಕ ಹೊಣೆ ಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ತಕ್ಷಣವೇ ವಜಾಗೊಳಿಸಬೇಕು.  ಪರೀಕ್ಷಾ ಅಕ್ರಮ ಹಾಗೂ ತೊಂದರೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಪರಿವಾರಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು. ಪರಿಸರ ಕಾರ್ಯಕರ್ತ ಸೋನಂ ವಾಂಗ್ಚುಕ್ ಅವರ ಬಿಡುಗಡೆ ಹಾಗೂ ಅವರ ಮುಕ್ತ ಓಡಾಟಕ್ಕೆ ಯಾವುದೇ ಅಡ್ಡಿಪಡಿಸಬಾರದು  ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳಾಗಿದ್ದವು

ವಿದ್ಯಾರ್ಥಿಗಳ ಉಗ್ರ ಪ್ರತಿಭಟನೆ ಹಾಗೂ ದೃಢವಾದ ಹೋರಾಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೊನೆಗೂ ಮಣಿಯಬೇಕಾಗಿ ಬಂದಿದ್ದು, ಸಚಿವರ ರಾಜೀನಾಮೆಯೊಂದಿಗೆ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ.


ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್









#news #viral #blogger #viralnews #dailypost

Post a Comment

0 Comments

ಜಾಹೀರಾತು

Responsive Advertisement