Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಭಾರತದ ಅನುಭವಿ ಬ್ಯಾಟ್ಸ್ ಮೆನ್ ಅಜಿಂಕ್ಯ ರಹಾನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ

ನವದೆಹಲಿ : ಭಾರತದ ಅನುಭವಿ ಬ್ಯಾಟರ್ ಅಜಿಂಕ್ಯ ರಹಾನೆ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ಅಧಿಕೃತ ವಿಡಿಯೊ ಸಂದೇಶದ ಮೂಲಕ 17 ವರ್ಷಗಳ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿರುವುದಾಗಿ ತಿಳಿಸಿದ್ದಾರೆ.

38 ವರ್ಷದ ರಹಾನೆ ಭಾರತ ಪರ 85 ಟೆಸ್ಟ್, 90 ಏಕದಿನ ಹಾಗೂ 20 ಟಿ20 ಪಂದ್ಯಗಳನ್ನು ಆಡಿದ್ದಾರೆ. ಈ ವರ್ಷ ನಡೆದ ಐಪಿಎಲ್‌ನಲ್ಲಿ ಕೊನೆಯ ಬಾರಿಗೆ ಮೈದಾನಕ್ಕಿಳಿದಿದ್ದ ಅವರು, ಇತ್ತೀಚೆಗಷ್ಟೇ ಭಾರತೀಯ ತಂಡಕ್ಕೆ ಮರಳುವ ಆಸೆಯನ್ನು ವ್ಯಕ್ತಪಡಿಸಿದ್ದರು.

ರಹಾನೆ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಆರಂಭಿಕ ಬ್ಯಾಟರ್ ಆಗಿ ಕಣಕ್ಕಿಳಿದು 31 ಎಸೆತಗಳಲ್ಲಿ 69 ರನ್ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಬಳಿಕ ಏಕದಿನ ಕ್ರಿಕೆಟ್‌ನಲ್ಲೂ ಉತ್ತಮ ಪ್ರದರ್ಶನ ನೀಡಿದರು. 2013ರ ಬಾರ್ಡರ್-ಗವಾಸ್ಕರ್ ಟ್ರೋಫಿಯ ದೆಹಲಿಯಲ್ಲಿ ನಡೆದ ನಾಲ್ಕನೇ ಟೆಸ್ಟ್ ಮೂಲಕ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು.

ಟೆಸ್ಟ್ ಕ್ರಿಕೆಟ್‌ನಲ್ಲಿ ರಹಾನೆ ಭಾರತದ ಪ್ರಮುಖ ಬ್ಯಾಟರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡರು. 85 ಟೆಸ್ಟ್ ಪಂದ್ಯಗಳಲ್ಲಿ 5,077 ರನ್ ಹಾಗೂ 90 ಏಕದಿನ ಪಂದ್ಯಗಳಲ್ಲಿ 2,962 ರನ್ ಗಳಿಸಿದ್ದಾರೆ. ವಿದೇಶಿ ನೆಲಗಳಲ್ಲಿ ಭಾರತಕ್ಕೆ ಹಲವು ಸ್ಮರಣೀಯ ಗೆಲುವುಗಳನ್ನು ತಂದುಕೊಡುವಲ್ಲಿ ಅವರು ಮಹತ್ವದ ಪಾತ್ರವಹಿಸಿದ್ದರು.


ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್


https://www.instagram.com/visheshachannel/

https://www.facebook.com/profile.php?id=61572771802334

https://x.com/VisheshaC4541

https://www.linkedin.com/in/visheshachannel/

www.youtube.com/@VisheshaChannelofficial



#news #viral #blogger #viralnews #dailypost


Post a Comment

0 Comments

ಜಾಹೀರಾತು

Responsive Advertisement